ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸಲು ರಕ್ಷಣಾ ಇಲಾಖೆ ಅನುಮತಿ ನೀಡಿದೆ.
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಧನ್ಯವಾದ ಹೇಳಿದ್ದಾರೆ. ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಸರ್ಕಾರ, ರಾಜ್ಯದ ಜನತೆಯ ಪರವಾಗಿ ಧನ್ಯವಾದಗಳು. ಮೈಸೂರು ದಸರಾಗೆ ತನ್ನದೇ ಆದ ಇತಿಹಾಸ ಇದೆ. ನಾಡಹಬ್ಬ ದಸರಾ ನೋಡಲು ಲಕ್ಷಾಂತರ ಜನರು ಬರುತ್ತಾರೆ. ಶ್ರದ್ಧಾ, ಭಕ್ತಿಗೆ ಸಾಕ್ಷಿಯಾದ ಮೈಸೂರು ದಸರಾದಲ್ಲಿ ಏರ್ ಶೋಗೆ ಅನುಮತಿ ನೀಡಿರುವುದಕ್ಕೆ ಧನ್ಯವಾದಗಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರು ದಸರಾ ಉತ್ಸವಕ್ಕೆ ಈಗಾಗಲೇ ಸಿದ್ಧತೆಗಳು ಆರಂಭವಾಗಿವೆ. ಗಜಪಡೆಗಳು ಆಗಮಿಸಿದ್ದು, ಅಂಬಾರಿ ಮೆರವಣಿಗೆ ಪೂರ್ವ ತಾಲೀಮು ಶುರು ಮಾಡಲಾಗಿದೆ.