ನವದೆಹಲಿ: ದೆಹಲಿಯ 5 ಶಾಲೆಗಳಿಗೆ ಇಂದು ಕೂಡ ಮತ್ತೆ ಬಾಂಬ್ ಬೆದರಿಕೆ ಹಾಕಲಾಗಿದೆ. ವಿದ್ಯಾರ್ಥಿಗಳು, ಶಿಕ್ಷಕರು, ಶಾಲಾ ಸಿಬ್ಬಂದಿಗಳು ಆತಂಕಕ್ಕೀಡಾಗಿದ್ದಾರೆ.
ದೆಹಲಿಯ ಪ್ರಸಾದ ನಗರ, ದ್ವಾರಕಾ ಸೆಕ್ಟರ್ ನ 5 ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಇದು ವಾರದಲ್ಲಿ ಮೂರನೇ ಬಾರಿಗೆ ಬಾಂಬ್ ಬೆದರಿಕೆ ಕರೆಯಾಗಿದೆ. ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಶಾಲೆಗಳಿಗೆ ಪೊಲೀಸರು, ಬಾಂಬ್ ಪತ್ತೆ ಹಾಗೂ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಭೇಟಿ ನೀಡಿದ್ದು, ಶಾಲೆಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.