HomeLatest NewsBREAKING: ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ

BREAKING: ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ

ಮಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಹೇಶ್ ತಿಮರೋಡಿ ವಿರುದ್ಧ ಉಡುಪಿಯ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಚಾರಣೆಗೆ ಹಾಜರಾಗುವಂತೆ ಬ್ರಹ್ಮಾವರ ಪೊಲೀಸರು ನೋಟಿಸ್ ನೀಡಿದ್ದರು. ಆದರೆ ಮಹೇಶ್ ತಿಮರೋಡಿ ವಿಚಾರಣೆಗೆ ಹಾಜರಾಗಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಮಹೇಶ್ ಶೆಟ್ಟಿ ತಿಮರೋಡಿ ಅವರ ಉಜಿರೆ ನಿವಾಸಕ್ಕೆ ಉಡುಪಿ ಎಎಸ್ ಪಿ ಸುಧಾಕರ್ ನಾಯಕ್ ನೇತೃತ್ವದ ತಂಡ ಎಂಟ್ರಿ ಕೊಟ್ಟಿದ್ದು, ವಿಚಾರಣೆಗೆ ಬರುವಂತೆ ಸೂಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹೇಶ್ ಶೆಟ್ಟಿ ತಿಮರೋಡಿ ತಮ್ಮ ಮನೆಯ ಒಳಗಿದ್ದು, ಹೊರಬರದೇ ಸತಾಯಿಸುತ್ತಿದ್ದಾರೆ. ವಹೇಶ್ ಶೆಟ್ಟಿ ತಿಮರೋಡಿಯನ್ನು ನಾವೇ ಬ್ರಹ್ಮಾವರ ಠಾಣೆಗೆ ಕರೆತರುತ್ತೇವೆ ಎಂದು ಅವರ ಪರ ವಕೀಲರು ಪೊಲೀಸರ ಬಳಿ ಹೇಳಿ ಮನವೊಲಿಕೆ ಯತ್ನ ನಡೆಸಿದರು. ಆದಾಗ್ಯೂ ಒಪ್ಪದ ಪೊಲೀಸರು ಮಹೇಶ್ ತಿಮರೋಡಿಯನ್ನು ಹೊರಗೆ ಬರುವಂತೆ ಸೂಚಿಸಿದ್ದಾರೆ. ಕೆಲ ಕಾಲ ನಿವಾಸದ ಬಳಿ ಹೈಡ್ರಾಮಾ ನಡೆದಿದೆ. ಬಳಿಕ ಮನೆಯಿಂದ ಹೊರ ಬಂದ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ವಿಚಾರಣೆಗೆ ಬ್ರಹ್ಮಾವರ ಠಾಣೆಗೆ ಕರೆದೊಯ್ದಿದ್ದಾರೆ. ಈ ವೇಳೆ ಮಹೇಶ ತಿಮರೋಡಿಯನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಉಡುಪಿ ಎಸ್ ಪಿ ಖಚಿತ ಪಡಿಸಿದ್ದಾರೆ.

ಪ್ರಕರಣ ಸಂಬಂಧ ಮಹೇಶ್ ತಿಮರೋಡಿಯನ್ನು ಪೊಲೀಸರು ಬಂಧಿಸುವ ಸಾಧ್ಯತೆಯೂ ದಟ್ಟವಾಗಿದೆ ಎಂದು ಹೇಳಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular