ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.
ಮಹೇಶ್ ತಿಮರೋಡಿ ಬಂಧನ ಬೆನ್ನಲ್ಲೇ ಬ್ರಹ್ಮಾವರ ಪೊಲೀಸ್ ಠಾಣೆ ಸುತ್ತಮುತ್ತ ವಾಹನ ಸಂಚಾರ ನಿಷೇಧಿಸಲಾಗಿದೆ. ಪೊಲೀಸ್ ಠಾಣೆಗೆ ಬಿಗಿ ಭದ್ರತೆ ಒದಗಿಸಲಾಗಿದೆ. ಬ್ರಹ್ಮಾವರ ಠಾಣೆ ಬಳಿ ಜನ ಸೇರುವಂತಿಲ್ಲ. ಪ್ರತಿಭಟನೆ ನಡೆಸುವಂತಿಲ್ಲ ಎಂದು ಖಡಕ್ ಆದೇಶ ಹೊರಡಿಸಲಾಗಿದೆ ಎಂದು ಉಡುಪಿ ಎಸ್ ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
ಒಂದು ವೇಳೆ ನಿಯಮ ಉಲ್ಲಂಘನೆ ಮಾಡಿದರೇ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಸದ್ಯ ಬಂಧಿತ ಮಹೇಶ್ ತಿಮರೋಡಿಯನ್ನು ವಿಚಾರಣೆ ನಡೆಸಲಾಗುತ್ತಿದೆ.