ಮಂಗಳೂರು: ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಆರೋಪದಲ್ಲಿ ಮಹೇಶ್ ತಿಮರೋಡಿ ಸೇರಿದಂತೆ ಹಲವರ ವಿರುದ್ಧ ಸಾಲು ಸಾಲು ದೂರುಗಳು ದಾಖಲಾಗುತ್ತಿದೆ. ಇದೀಗ ಮಹೇಶ್ ತಿಮರೋಡಿ ಸೇರಿದಂತೆ ನಾಲ್ವರ ವಿರುದ್ಧ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ದೂರು ದಾಖಲಿಸಿದ್ದಾರೆ.
ಧರ್ಮಸ್ಥಳ ಠಾಣೆಗೆ ಆಗಮಿಸಿರುವ ಮೈಸೂರು ಮೂಲದ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ, ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಯೂಟ್ಯೂಬರ್ ಸಮೀರ್ ಹಾಗೂ ಸುಜಾತಾ ಭಟ್ ವಿರುದ್ಧ ದೂರು ದಾಖಲಿಸಿದ್ದಾರೆ.
ದೂರು ಸ್ವೀಕರಿಸಿರುವುದಾಗಿ ಧರ್ಮಸ್ಥಳ ಪೊಲೀಸರು ಹಿಂಬರಹ ಕೊಟ್ಟಿದ್ದಾರೆ. ನಾಲ್ವರೂ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡಿ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟುಮಾಡುವ ಕೆಲಸ ಮಾಡುತ್ತಿದ್ದು, ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.