ಬೆಂಗಳೂರು: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಆರೋಪದಲ್ಲಿ ಪೊಲೀಸರ ನೋಟೀಸ್ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಬೇಕಿದ್ದ ಯೂಟ್ಯೂಬರ್ ಸಮೀರ್ ಎಂ.ಡಿ ನಾಪತ್ತೆಯಾಗಿದ್ದಾನಾ? ಎಂಬ ಪ್ರಶ್ನೆ ಮೂಡಿದೆ.
ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿರುವ ಆರೋಪದಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಸಮೀರ್ ಎಂ.ಡಿ ಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದರು. ಆದರೆ ಸಮೀರ್ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಪೊಲೀಸರು ಅರೆಸ್ಟ್ ವಾರಂಟ್ ಮೂಲಕ ಸಮಿರ್ ಎಂ.ಡಿಯ ಬೆಂಗಳೂರು ನಿವಾಸಕ್ಕೆ ಆಗಮಿಸಿದ್ದಾರೆ.
ಸಮೀರ್ ಎಂ.ಡಿ ಬೆಂಗಳೂರಿನ ಜಿಗಣಿ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಧರ್ಮಸ್ಥಳ ಪೊಲೀಸರು ಜಗಣಿ ಬಳಿ ನಿವಾಸಕ್ಕೆ ಆಗಮಿಸಿದ್ದಾರೆ. ಆದರೆ ಸಮಿರ್ ಮನೆಯಲ್ಲಿ ಇಲ್ಲ ಎನ್ನಲಾಗಿದೆ. ಆತ ಬೆಂಗಳೂರಿನಲ್ಲಿ ಇಲ್ಲ, ಮಂಗಳೂರಿಗೆ ಹೋಗಿದ್ದಾನೆ ಎಂಬ ಮಾಹಿತಿಯನ್ನು ಮನೆಯವರು ನೀಡಿದ್ದಾರೆ. ಬಂಧನ ಭೀತಿಯಲ್ಲಿರುವ ಸಮೀರ್ ಎಂ.ಡಿ ಬೆಂಗಳೂರಿನಿಂದ ನಾಪತ್ತೆಯಾಗಿದ್ದಾನಾ? ಎಂಬ ಅನುಮಾನ ವ್ಯಕ್ತವಾಗಿದೆ.