ಮಂಗಳೂರು: ಬಂಧನ ಭೀತಿಯಲ್ಲಿದ್ದ ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಮಂಗಳೂರು ನ್ಯಾಯಾಲಯ ಆದೇಶ ಹೊರಡಿಸಿದೆ.
ಎಐ ವಿಡಿಯೋ ಸೃಷ್ಟಿಸಿ ಗಲಭೆಗೆ ಪ್ರಚೋದನೆ, ಅಪಪ್ರಚಾರ, ತಪ್ಪು ಮಾಹಿತಿ ಮೂಲಕ ಪ್ರಚೋದನಕಾರಿ ಹೇಳಿಕೆ ಆರೋಪದಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಸಮೀರ್ ಎಂ.ಡಿ ಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದರು. ಆದರೆ ಸಮೀರ್ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ನಡುವೆ ಆಗಸ್ಟ್ 19ರಂದು ಸಮೀರ್ ಎಂ.ಡಿ ಮಂಗಳೂರು ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮಿನುಗಾಗಿ ಅರ್ಜಿ ಸಲ್ಲಿದ್ದರು.
ಇಂದು ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಾಲಯ ಸಮೀರ್ ಎಂ.ಡಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಬಂಧನ ಭೀತಿಯಿಂದ ಸಮೀರ್ ಪಾರಾಗಿದ್ದಾರೆ.
You Might Also Like
TAGGED:ಸಮೀರ್ ಎಂ.ಡಿ.ಜಾಮೀನು