ಮಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಹೇಶ್ ತಿಮರೋಡಿಯನ್ನು ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಇದೀಗ ಮಹೇಶ್ ತಿಮರೋಡಿ ಅವರ ಮೂವರು ಸಹಚರರನ್ನು ಕೂಡ ಬಂಧಿಸಲಾಗಿದೆ.
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಹಿನ್ನೆಲೆಯಲ್ಲಿ ಮಹೇಶ್ ತಿಮರೋಡಿಯ ಮೂವರು ಸಹಚರರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಸೃಜನ್, ಹಿತೇಶ್ ಹಾಗೂ ಸಹನ್ ಬಂಧಿತರು.
ಮಹೇಶ್ ತಿಮರೋಡಿಯನ್ನು ಬಂಧಿಸಿ ಕರೆದೊಯ್ಯುವ ವೇಳೆ ಈ ಮೂವರು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು. ಅಲ್ಲದೇ ಪೊಲೀಸರ ವಾಹನಕ್ಕೆ ತಮ್ಮ ಕಾರನ್ನು ಡಿಕ್ಕಿ ಹೊಡೆದಿದ್ದರು. ಈ ಹಿನ್ನೆಲೆಯಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.