HomeLatest Newsಬಡ ರೋಗಿಗಳಿಗೆ ಗುಡ್ ನ್ಯೂಸ್: ಕೈಗೆಟಕುವ ದರದಲ್ಲಿ ಗುಣಮಟ್ಟದ ಚಿಕಿತ್ಸೆ ನೀಡಲು ಕ್ಯಾನ್ಸರ್ ಔಷಧ, ಉಪಕರಣಗಳ...

ಬಡ ರೋಗಿಗಳಿಗೆ ಗುಡ್ ನ್ಯೂಸ್: ಕೈಗೆಟಕುವ ದರದಲ್ಲಿ ಗುಣಮಟ್ಟದ ಚಿಕಿತ್ಸೆ ನೀಡಲು ಕ್ಯಾನ್ಸರ್ ಔಷಧ, ಉಪಕರಣಗಳ ಕಸ್ಟಮ್ಸ್ ಸುಂಕ ವಿನಾಯಿತಿ ಭರವಸೆ  

ನವದೆಹಲಿ: ಕ್ಯಾನ್ಸರ್ ಔಷಧ ಮತ್ತು ರೇಡಿಯೋಥೆರಪಿ ಉಪಕರಣಗಳ ಮೇಲಿನ ಕಸ್ಟಮ್ಸ್ ಸುಂಕಕ್ಕೆ ವಿನಾಯಿತಿ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದ್ದಾರೆ.

ಸಂಸದ ಡಾ.ಸಿ.ಎನ್. ಮಂಜುನಾಥ್ ಅವರು ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಅವರು ಈ ಬಗ್ಗೆ ಭರವಸೆ ನೀಡಿದ್ದಾರೆ.  

ಇತ್ತೀಚಿನ ದಿನಗಳಲ್ಲಿ ಬದಲಾದ ಆಹಾರ ಶೈಲಿ, ಜೀವನ ಪದ್ಧತಿ ಸೇರಿದಂತೆ ಅನೇಕ ಕಾರಣಗಳಿಂದಾಗಿ ಕ್ಯಾನ್ಸರ್ ಪೀಡಿತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ಈಗಾಗಲೇ ಕೇಂದ್ರ ಸರ್ಕಾರ ಕ್ಯಾನ್ಸರ್ ನಿಂದಾಗಿ ಬಳಲುತ್ತಿರುವ ರೋಗಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಿಮೋಥೆರಪಿಗೆ ಬಳಸುವ ಅನೇಕ ಔಷಧಗಳನ್ನು ಕಸ್ಟಮ್ಸ್ ಸುಂಕ ರಿಯಾಯಿತಿ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕ್ಯಾನ್ಸರ್ ನಿಂದ ಸಂಪೂರ್ಣವಾಗಿ ಗುಣಮುಖರಾಗಲು ಮುಂದುವರಿದ ಚಿಕಿತ್ಸಾ ಭಾಗವಾಗಿ ಕಿಮೋಥೆರಪಿಯ ಜೊತೆಗೆ ಇಮ್ಯೂನೋಥೆರಪಿಯ ಅವಶ್ಯಕತೆ ಇದ್ದು, ಪ್ರಸ್ತುತ ಇಮ್ಯೂನೋಥೆರಪಿ ಚಿಕಿತ್ಸೆಗೆ ಪ್ರತಿ ರೋಗಿಗೆ ಸುಮಾರು 20-50 ಲಕ್ಷ ದಷ್ಟು ಖರ್ಚಾಗುತ್ತಿದೆ. ಈ ಹಿನ್ನಲೆ ವಿದೇಶದಿಂದ ಆಮದು ಮಾಡಿಕೊಳ್ಳಲಾಗುವ ಇಮ್ಯೂನೋಥೆರಪಿ ಗೆ ಬಳಸುವ ಔಷಧಗಳನ್ನು ಮತ್ತು ರೇಡಿಯೋಥೆರಪಿ ಉಪಕರಣಗಳ ಮೇಲಿನ ಕಸ್ಟಮ್ಸ್ ಸುಂಕಕ್ಕೆ ವಿನಾಯಿತಿ ನೀಡುವಂತೆ ಮನವಿ ಸಲ್ಲಿಸಿದ್ದಾರೆ.

ವಿದೇಶದಿಂದ ಆಮದು ಮಾಡಿಕೊಳ್ಳಲಾಗುವ ಇಮ್ಯೂನೋಥೆರಪಿ ಗೆ ಬಳಸುವ ಔಷಧಗಳನ್ನು ಮತ್ತು ರೇಡಿಯೋಥೆರಪಿ ಉಪಕರಣಗಳ ಮೇಲಿನ ಕಸ್ಟಮ್ಸ್ ಸುಂಕ ವಿನಾಯಿತಿಯಿಂದ ಕ್ಯಾನ್ಸರ್ ಚಿಕಿತ್ಸಾ ವೆಚ್ಚ ಕಡಿಮೆಯಾಗಲಿದ್ದು ಇದರಿಂದಾಗಿ ಲಕ್ಷಾಂತರ ಬಡವರಿಗೆ ಅನುಕೂಲವಾಗಲಿದೆ ಮತ್ತು ಕೈಗೆಟಕುವ ದರದಲ್ಲಿ ಬಡವರಿಗೆ ಗುಣಮಟ್ಟದ ಚಿಕಿತ್ಸೆ ನೀಡಲು ಸಹಕಾರಿಯಾಗಲಿದೆ ಎಂದು ಹೇಳಿದ್ದು, ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಆದಷ್ಟು ಬೇಗ ಈ ಬಗ್ಗೆ ಕ್ರಮ ವಹಿಸುವುದಾಗಿ ಭರವಸೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular