BREAKING : ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್ : ‘ಟ್ರಾಫಿಕ್ ದಂಡ’ ಪಾವತಿಗೆ ಶೇ.50ರಷ್ಟು ರಿಯಾಯಿತಿ ನೀಡಿ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದ   ವಾಹನ ಸವಾರರಿಗೆ ಮತ್ತೆ ಗುಡ್ ನ್ಯೂಸ್ ಸಿಕ್ಕಿದ್ದು, ಸಂಚಾರ ನಿಯಮ ಉಲ್ಲಂಘನೆಗೆ ದಂಡ ಕಟ್ಟಲು ಮತ್ತೆ ಶೇ.50 ರಿಯಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ಆದೇಶಿಸಿದೆ.

ಈ ರಿಯಾಯಿತಿಯು ದಿನಾಂಕ:23.08.2025 ರಿಂದ 12.09.2025ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ.ಈ ಆದೇಶವನ್ನು ಆರ್ಥಿಕ ಇಲಾಖೆಯು ಅನಧಿಕೃತ ಟಿಪ್ಪಣಿ ಸಂಖ್ಯೆ ಆಇ 52 ವೆಚ್ಚ-11 2023 ದಿನಾಂಕ:02.08.2025 ಮತ್ತು ದಿನಾಂಕ:16.08.2025 ರಲ್ಲಿ ನೀಡಿರುವ ಸಹಮತಿಯನ್ವಯ ಹೊರಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read