HomeLatest Newsವಾಹನ ಸವಾರರಿಗೆ ಗುಡ್ ನ್ಯೂಸ್: ಇ-ಚಲನ್‌ ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ....

ವಾಹನ ಸವಾರರಿಗೆ ಗುಡ್ ನ್ಯೂಸ್: ಇ-ಚಲನ್‌ ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ. 50 ರಷ್ಟು ರಿಯಾಯಿತಿ ನೀಡಿ ಸರ್ಕಾರ ಆದೇಶ

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ಸರ್ಕಾರವು 2025ನೇ ಆಗಸ್ಟ್ 21 ರಂದು ಆದೇಶ ಹೊರಡಿಸಿದೆ.

ಈ ರಿಯಾಯಿತಿಯು 2025ನೇ ಆಗಸ್ಟ್ 23 ರಿಂದ ಸೆಪ್ಟೆಂಬರ್ 12  ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ.

ಸರ್ಕಾರದ ಆದೇಶದ ದಿನಾಂಕ:11.02.2023ರ ಒಳಗಾಗಿ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಒಂದು ಬಾರಿಯ ಕ್ರಮವಾಗಿ (one time measure) ಮಾತ್ರ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ಸರ್ಕಾರದ  ದಿನಾಂಕ: 03-03-2023ರ ಆದೇಶದಲ್ಲಿ  ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಿನಾಂಕ:11.02.2023ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ. ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು.

ಸರ್ಕಾರದ ದಿನಾಂಕ 05-07-2023 ರ ಆದೇಶದಲ್ಲಿ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಿನಾಂಕ:11.02.2023 ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ಆದೇಶಿಸಲಾಗಿತ್ತು ಹಾಗೂ ಈ ರಿಯಾಯಿತಿಯು ದಿನಾಂಕ:09.09.2023 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ತಿಳಿಸಲಾಗಿತ್ತು.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳ ದಿನಾಂಕ 26-06-2025 ಮತ್ತು ದಿನಾಂಕ 12-08-2025 ಪತ್ರಗಳಲ್ಲಿ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50%ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ದಿನಾಂಕ:05.07.2025 ರಿಂದ 11.07.2025ರವರೆಗೆ ಕಾಲಾವಕಾಶವನ್ನು ಕಲ್ಪಿಸಿ ಆದೇಶ ಹೊರಡಿಸುವಂತೆ ಕೋರಲಾಗಿತ್ತು.  ಮುಂದುವರೆದು ಸದರಿ ಅವಧಿಯು ಮುಕ್ತಾಯವಾಗಿರುವುದರಿಂದ ಸದರಿ ಕಾಲಾವಕಾಶವನ್ನು ದಿನಾಂಕ:23.08.2025 ರಿಂದ 12.09.2025ರವರೆಗೆ ಕಲ್ಪಿಸುವಂತೆ ಕೋರಿರುತ್ತಾರೆ.

ಬೆಂಗಳೂರು ಸಾರಿಗೆ  ಮತ್ತು ರಸ್ತೆ ಸುರಕ್ಷತೆ ಆಯುಕ್ತರು ದಿನಾಂಕ 04-03-2025 ರ ಪ್ರಸ್ತಾವನೆಯಲ್ಲಿ  ಪೊಲೀಸ್ ಇಲಾಖೆಯ ಸಂಚಾರಿ e-Challan ಗಳಲ್ಲಿ ಶೇ.50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಹಾಗೂ ಸಾರಿಗೆ ಇಲಾಖೆಯಲ್ಲಿ 2018-19ನೇ ಸಾಲಿನ ಪೂರ್ವದಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ವಾಹನ ಮಾಲೀಕರುಗಳಿಂದ ಶೇ.50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಅವಕಾಶ ಕಲ್ಪಿಸುವಂತೆ ಕೋರಿರುತ್ತಾರೆ.

ಸದರಿ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ಸರ್ಕಾರವು  ಈ ರಿಯಾಯಿತಿಯು  2025ನೇ ಆಗಸ್ಟ್ 23 ರಿಂದ ಸೆಪ್ಟೆಂಬರ್ 12  ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಆದೇಶಿಸಲಾಗಿದೆ ಎಂದು ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿಗಳು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular