HomeLatest NewsBREAKING: ಅನನ್ಯಾ ಭಟ್ ನಾಪತ್ತೆ ಕೇಸ್ ಗೆ ಬಿಗ್ ಟ್ವಿಸ್ಟ್: ಎಸ್ಐಟಿಯಿಂದ ನೋಟಿಸ್ ಜಾರಿ ಬೆನ್ನಲ್ಲೇ...

BREAKING: ಅನನ್ಯಾ ಭಟ್ ನಾಪತ್ತೆ ಕೇಸ್ ಗೆ ಬಿಗ್ ಟ್ವಿಸ್ಟ್: ಎಸ್ಐಟಿಯಿಂದ ನೋಟಿಸ್ ಜಾರಿ ಬೆನ್ನಲ್ಲೇ ಸುಜಾತಾ ಭಟ್ ಉಲ್ಟಾ

ಬೆಂಗಳೂರು: ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿಯಿಂದ ಸುಜಾತಾ ಭಟ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ.

ಅನನ್ಯಾ ಭಟ್ ನಾಪತ್ತೆ ಪ್ರಕರಣದ ವಿವರ ನೀಡುವಂತೆ ಸುಜಾತಾ ಭಟ್ ಅವರಿಗೆ ಎಸ್ಐಟಿಯಿಂದ ನೋಟಿಸ್ ನೀಡಲಾಗಿದೆ. ಕೇಸ್ ವಾಪಸ್ ಪಡೆಯುವುದಾಗಿ ಸುಜಾತಾ ಭಟ್ ಹೇಳಿದ್ದಾರೆ. ಆದರೆ ಕೇಸ್ ಹಿಂಪಡೆಯುವ ಬಗ್ಗೆ ಎಸ್ಐಟಿಗೆ ಸುಜಾತಾ ಭಟ್ ತಿಳಿಸಿಲ್ಲ ಎನ್ನಲಾಗಿದೆ.

ನನ್ನ ಮಗಳು ಅನನ್ಯಾ ಭಟ್ ಧರ್ಮಸ್ಥಳಕ್ಕೆ ಹೋಗಿದ್ದ ವೇಳೆ ನಾಪತ್ತೆಯಾಗಿರುವುದಾಗಿ ಸುಜಾತಾ ಭಟ್ ದೂರು ನೀಡಿದ್ದರು. ತಮ್ಮ ಪುತ್ರಿಯ ಫೋಟೋವನ್ನು ಕೂಡ ತೋರಿಸಿದ್ದರು. ಆದರೆ ಸುಜಾತಾ ಭಟ್ ಮದುವೆಯಾಗಿಲ್ಲ, ಮಕ್ಕಳು ಕೂಡ ಇಲ್ಲವೆಂದು ಅವರ ಸಹೋದರ ಸ್ಪೋಟಕ ಹೇಳಿಕೆ ನೀಡಿದ್ದರು. ಸುಜಾತಾ ತೋರಿಸಿರುವ ಫೋಟೋ ನನ್ನ ತಂಗಿಯ ಫೋಟೋ ಎಂದು ತಿಳಿಸಿದ್ದರು. ಈ ನಡುವೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಸುಜಾತಾ ಭಟ್ ವಿರುದ್ಧ ದೂರು ನೀಡಿದ್ದಾರೆ. ಅನನ್ಯ ಭಟ್ ನಾಪತ್ತೆ ಪ್ರಕರಣದ ತನಿಖೆಯನ್ನು ಸರ್ಕಾರ ಎಸ್ಐಟಿಗೆ ವಹಿಸಿದೆ. ಇದರ ಬೆನ್ನಲ್ಲೇ ವಿಚಾರಣೆಗೆ ಹಾಜರಾಗಲು ಸುಜಾತಾ ಭಟ್ ಗೆ ತಿಳಿಸಲಾಗಿದ್ದು, ಅವರು ಕೇಸ್ ವಾಪಸ್ ಪಡೆಯಲು ಮುಂದಾಗಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular