HomeLatest Newsರಾಜ್ಯ ಸರ್ಕಾರದಿಂದ 'ST' ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ...

ರಾಜ್ಯ ಸರ್ಕಾರದಿಂದ ‘ST’ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

2025-26ನೇ ಸಾಲಿನ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮಗಳಿಂದ ಪರಿಶಿಷ್ಟ ಪಂಗಡದ ನಾಯಕ ಹಾಗೂ ಮರಾಟಿ ಉಪ ಜಾತಿಗೆ ಸೇರಿದ ಜನರ ಆರ್ಥಿಕ ಅಭಿವೃದ್ಧಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳು ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ https://sevasindhu.karnataka.gov.in ನ್ನು ಸಂಪರ್ಕಿಸಬಹುದು. ಸ್ವಯಂ ಉದ್ಯೋಗ ಯೋಜನೆ: ನೇರಸಾಲ ಯೋಜನೆ: ಕಿರು ಆರ್ಥಿಕ ಚಟುವಟಿಕೆಗಳನ್ನು ಪ್ರಾರಂಬಿಸಲು ನಿಗಮದಿಂದ ಸಹಾಯಧನ ಮತ್ತು ನೇರಸಾಲ ಮಂಜೂರು ಮಾಡಲಾಗುತ್ತದೆ.

ಹೈನುಗಾರಿಕೆ (ಬ್ಯಾಂಕ್ ಸಹಯೋಗದೊಂದಿಗೆ) ಹೈನುಗಾರಿಕೆ ಕೈಗೊಳ್ಳಲು ಎರಡು ಎಮ್ಮೆ/ ಹಸುಗಳಿಗೆ ಘಟಕ ವೆಚ್ಚದ ಶೇ.50 ರಷ್ಟು ಅಥವಾ ಗರಿಷ್ಟ ರೂ.1.25 ಲಕ್ಷಗಳ ಸಹಾಯಧನ. ಸ್ವಾವಲಂಬಿತ ಸಾರಥಿ (ಬ್ಯಾಂಕ್ ಸಹಯೋಗದೊಂದಿಗೆ) ಸರಕು ವಾಹನ / ಟ್ಯಾಕ್ಸಿ (ಹಳದಿ ಬೋರ್ಡ್) ಉದ್ದೇಶದಡಿ ಘಟಕ ವೆಚ್ಚ ಶೇ.75 ರಷ್ಟು ಅಥವಾ ಗರಿಷ್ಟ ರೂ.4 ಲಕ್ಷಗಳ ಸಹಾಯಧನ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉದ್ಯಮಶೀಲತಾ ಅಭಿವೃದ್ಧಿ ಯೋಜನೆ: (ಬ್ಯಾಂಕುಗಳ ಸಹಯೋಗದೊಂದಿಗೆ)ಇತರೇ ಉದ್ದೇಶ: ವ್ಯಾಪಾರ ಮತ್ತು ಇತರೇ ಉದ್ದೇಶಗಳಿಗೆ ಘಟಕ ವೆಚ್ಚದ ಶೇ.70 ರಷ್ಟು ಅಥವಾ ಗರಿಷ್ಟ ರೂ.2 ಲಕ್ಷ ಸಹಾಯಧನ.
ಮೈಕ್ರೋ ಕ್ರೆಡಿಟ್ ಯೋಜನೆ (ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘಗಳು): ಮಹಿಳಾ ಸ್ವಸಹಾಯ ಸಂಘಗಳಿಗೆ (ಕನಿಷ್ಟ 10 ಸದಸ್ಯರು) ಕಿರು ಆರ್ಥಿಕ ಚಟುವಟಿಕೆಗಳಿಗೆ ಸಾಲ ಮತ್ತು ಸಹಾಯಧನ ಸೌಲಭ್ಯ ನೀಡಲಾಗುವುದು. ಘಟಕ ವೆಚ್ಚ ರೂ 5 ಲಕ್ಷ ಇದರಲ್ಲಿ ಸಹಾಯಧನ ರೂ.2.50 ಲಕ್ಷ, ಸಾಲ ರೂ. 2.50 ಲಕ್ಷ (ಶೇ.4 ರಷ್ಟು ಬಡ್ಡಿದರ)

ಗಂಗಾ ಕಲ್ಯಾಣ ಯೋಜನೆ: 1.20 ಎಕರೆಯಿಂದ 5 ಎಕರೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಕೊಳವೆ ಬಾವಿ ಕೊರೆದು ಪಂಪ್ಸೆಟ್ ಅಳವಡಿಸಿ ವಿದ್ಯುದ್ಧೀಕರಣಗೊಳಿಸಿ ನೀರಾವರಿ ಸೌಲಭ್ಯ ಒದಗಿಸಲಾಗುವುದು. ಘಟಕ ವೆಚ್ಚ ರೂ. 3.75 ಲಕ್ಷ (ಇದರಲ್ಲಿ ರೂ.50 ಸಾವಿರ ಸಾಲವೂ ಸೇರಿರುತ್ತದೆ.)

ಭೂ ಒಡೆತನ ಯೋಜನೆ: ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಕನಿಷ್ಟ ಒಂದು ಎಕರೆ ಭಾಗಾಯ್ತು ಅಥವಾ ಎರಡು ಏಕರೆ ಖುಷ್ಕಿ ಜಮೀನನ್ನು ಖರೀದಿಸಿ ಕೊಡಲಾಗುವುದು. ಘಟಕ ವೆಚ್ಚ ರೂ.20 ಲಕ್ಷ ಸಹಾಯಧನ ಶೇ.50. ಸಾಲ ಶೇ.50 (ಶೇಕಡ 4 ರಷ್ಟು ಬಡ್ಡಿದರ) ಯೋಜನೆಗಳ ಹೆಚ್ಚಿನ ಮಾಹಿತಿಗೆ ನಿಗಮದ ವೆಬ್ಸೈಟ್ ಮೂಲಕ ಪಡೆದುಕೊಳ್ಳುವುದು.

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ: https://kmvstdcl.karnataka.gov.in/
ಫಲಾಪೇಕ್ಷಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಮತ್ತು ದಾಖಲಾತಿಗಳನ್ನು ಸುವಿದಾ ತಂತ್ರಾಂಶದ ವೆಬ್ಸೈಟ್ ವಿಳಾಸ : https://sevasindhu.karnataka.gov.inಮೂಲಕ ಅಪ್ಲೋಡ್ ಮಾಡಿ ಅರ್ಜಿಗಳನ್ನು ದಿನಾಂಕ ಸೆಪ್ಟೆಂಬರ್, 17 ರೊಳಗೆ ಸಲ್ಲಿಸಿ ಒಂದು ಪ್ರತಿಯನ್ನು ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ ದೂ.ಸಂ.08272-228857 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಚಂದ್ರಪ್ಪ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular