ಮಂಡ್ಯ: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಇಂದು ವಿವಿಧ ಸಂಘಟನೆಗಳು ಮಂಡ್ಯ ಜಿಲ್ಲೆಯ ಮದ್ದೂರು ಬಂದ್ ಗೆ ಕರೆ ನೀಡಿದ್ದು, ವ್ಯಾಪಕ ಬೆಂಬಲ ವ್ಯಕ್ತವಾಗಿದೆ.
ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ, ಹಿಂದೂ ರಕ್ಷಣಾ ಸಮಿತಿಯಿಮ್ದ ಮದ್ದೂರು ಬಂದ್ ಗೆ ಕರೆ ನೀಡಲಾಗಿದ್ದು, ಅಂಗಡಿ, ಮುಂಗಟ್ಟುಗಳನ್ನು ಬಂದ್ ಮಾಡಿ ಬಂದ್ ಗೆ ವ್ಯಾಪಕ ಬೆಂಬಲ ಸೂಚಿಸಲಾಗಿದೆ.
ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುತ್ತಿರುವವರನ್ನು ಗಡಿಪಾರು ಮಾಡಬೇಕು. ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬೃಹತ್ ಪ್ರತಿಭಟನಾ ಮೆವ್ರವಣಿಗೆ ನಡೆಸಲಾಗುತ್ತಿದೆ. ನರಸಿಂಹಸ್ವಾಮಿ ದೇವಸ್ಥಾನದಿಂದ ಹಿಂದೂ ಸಂಘಟನೆಗಳ ಬೃಹತ್ ರ್ಯಾಲಿ ನಡೆಯಲಿದೆ.