ಬೆಂಗಳೂರು : ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ಬೆನ್ನಲ್ಲೇ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಸ್ನೇಹಿತರ ಜೊತೆ ಶಾಸಕರು ಸಿಕ್ಕಿಂನಲ್ಲಿ ಇದ್ದಾಗ ಇಡಿ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೆ.ಸಿ ವೀರೇಂದ್ರ ಪಪ್ಪಿಯನ್ನು ವಶಕ್ಕೆ ಪಡೆಯಲಾಗಿದೆ.
ಇಂದು ಬೆಳ್ಳಂ ಬೆಳಗ್ಗೆ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಹಾಗೂ ಸಹೋದರರ ನಿವಾಸದ ಮೇಲೆ ಇಡಿ ( E.D) ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿರುವ 4 ಮನೆಗಳ ಮೇಲೆ ಇಡಿ ದಾಳಿ ನಡೆಸಿದೆ . ಕೆಸಿ ವೀರೇಂದ್ರ, ಕೆಸಿ ನಾಗರಾಜ, ಕೆಸಿ ತಿಪ್ಪೇಸ್ವಾಮಿ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದರು.
You Might Also Like
TAGGED:ವೀರೇಂದ್ರ ಪಪ್ಪಿ