ಕಲಬುರಗಿ: ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಹೈದರಾಬಾದ್ ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕಲಬುರಗಿಯ ಸೇಡಂ ತಾಲೂಕಿನ ರಂಜೋಳ ಗ್ರಾಮದ ನಿವಾಸಿಗಳಾದ ಐವರು ಹೈದರಾಬಾದ್ ನಲ್ಲಿ ಮೃತಪಟ್ಟಿದ್ದಾರೆ. ಸದ್ಯ ಮೃತದೇಹಗಳನ್ನು ಸ್ವಗ್ರಾಮಕ್ಕೆ ತರಲಾಗಿದೆ. ನರಸಿಂಹ (60), ಪತ್ನಿ ವೆಂಕಟಮ್ಮ (55), ಮಗ ಅನಿಲ್ (32), ಮಗಳು ಕವಿತಾ (24) ಹಾಗೂ ಮೊಮ್ಮಗ ಅಪ್ಪು (2) ಮೃತರು.
ಹೈದರಾಬಾದ್ ನಲ್ಲಿ ಮನೆಯೊಂದರಲ್ಲಿ ಐವರು ಶವವಾಗಿ ಪತ್ತೆಯಾಗಿದ್ದಾರೆ. ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮಸ್ಥರೇ ಅಂತ್ಯ ಸಂಸ್ಕಾರ ನೆರವೇರಿಸಿ ಮಾನವೀಯತೆ ಮೆರೆದಿದ್ದಾರೆ.