ಬೆಂಗಳೂರು: ಬೆಂಗಳೂರಿನ ಕೊಡಿಗೇಹಳ್ಳಿ ಠಾಣೆ ಪೋಲೀಸರು ವಕೀಲ ಕೆ.ಎನ್. ಜಗದೀಶ್ ಕುಮಾರ್ ಅವರನ್ನು ಬಂಧಿಸಿದ್ದಾರೆ.
ಜಗದೀಶ್ ಅವರನ್ನು ಠಾಣೆಗೆ ಕರೆತಂದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಜಾತಿ ನಿಂದನೆ ಆರೋಪದಡಿ ಬಂಧಿಸಲಾಗಿದೆ. ಮಂಜುನಾಥ ಎಂಬುವವರು ನೀಡಿದ್ದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಲಾಗಿತ್ತು.
ಸಾಮಾಜಿಕ ಜಾಲತಾಣದಲ್ಲಿ ಜಾತಿ ಬಗ್ಗೆ ಮಾತನಾಡಿದ ಪ್ರಕರಣ ಸಂಬಂಧ ವಕೀಲ ಜಗದೀಶ್ ಅವರಿಗೆ ಕೊಡಿಗೇಹಳ್ಳಿ ಠಾಣೆ ಪೊಲೀಸರು ನೋಟಿಸ್ ನೀಡಲು ಅವರ ಮನೆಗೆ ತೆರಳಿದ್ದಾಗ ಬಾಗಿಲು ತೆಗೆದಿರಲಿಲ್ಲ. ಹೀಗಾಗಿ ವಾಪಸ್ ಬಂದಿದ್ದರು. ಪೊಲೀಸರು ಮನೆಗೆ ಬಂದ ಬಗ್ಗೆ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದ ಜಗದೀಶ್ ನಾನು ಮನೆಯಲ್ಲಿ ಇಲ್ಲದಿರುವಾಗ ಕೊಡಿಗೇಹಳ್ಳಿ ಪೊಲೀಸರು ಯಾವುದೇ ನೋಟಿಸ್ ನೀಡದೆ ಮನೆ ಬಳಿ ಬಂದಿದ್ದಾರೆ. ಮನೆಯ ನಾಯಿಗಳಿಗೆ ಮಂಪರು ಔಷಧಿ ನೀಡಿ ಅನಧಿಕೃತವಾಗಿ ಕಾಂಪೌಂಡ್ ಜಿಗಿದು ಬಂದಿದ್ದಾರೆ. ನಮ್ಮ ಕುಟುಂಬದವರನ್ನು ಭಯಪಡಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿದ್ದರು.