2025-26 ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ ಬೆಳೆ ಕಟಾವಿನ ನಂತರ ಹಾಗೂ ಸ್ಥಳ ನಿರ್ದಿಷ್ಟ ವಿಕೋಪಗಳಿಂದ ಬೆಳೆ ನಷ್ಟ ಪರಿಹಾರಕ್ಕೆ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸುವಂತೆ ಕೊಪ್ಪಳ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಪ್ರಸಕ್ತ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲಿ ಒಣಗಲು ಬಿಟ್ಟ ಸಂದರ್ಭದಲ್ಲಿ ಕಟಾವು ಕೈಗೊಳ್ಳುವ ಎರಡು ವಾರದೊಳಗಾಗಿ ಚಂಡಮಾರುತ ಸಹಿತ ಮಳೆ ಅಥವಾ ಅಕಾಲಿಕ ಮಳೆಯಿಂದ ಬೆಳೆ ನಷ್ಟವಾದರೆ ರೈತರು ನೇರವಾಗಿ ವಿಮಾ ಸಂಸ್ಥೆಯ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಬೇಕು. ಅದೇ ರೀತಿ ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪಗಳಿಂದ ಅತಿಯಾದ ಮಳೆ, ಬೆಳೆ ಮುಳುಗಡೆ, ಆಲಿಕಲ್ಲು ಮಳೆ, ಭೂ ಕುಸಿತ ಇಂತಹ ಅವಘಡಗಳಿಂದ ಬೆಳೆ ನಷ್ಟವಾದರೆ ಅವಗಡ ಸಂಭವಿಸಿದ 72 ಗಂಟೆಯೊಳಗಾಗಿ ರೈತರು ಟಾಟಾ ಎಐಜಿ (TATA AIG) ವಿಮಾ ಸಂಸ್ಥೆಯ ಟೋಲ್ ಫ್ರೀ ಸಂಖ್ಯೆ 18002093536 ಗೆ ಕರೆ ಮಾಡಿ ದೂರು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ/ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಅಥವಾ ವಿಮಾ ಸಂಸ್ಥೆಯ ಪ್ರತಿನಿಧಿಯನ್ನು ಸಂಪರ್ಕಿಸುವAತೆ ಜಂಟಿ ಕೃಷಿ ನಿರ್ದೇಶಕರ ಕಛೇರಿಯ ಪ್ರಕಟಣೆ ತಿಳಿಸಿದೆ.