ಅಡಿಕೆ ಔಷಧಿ ಸಿಂಪಡಿಸುವಾಗ ಮರದಿಂದ ಬಿದ್ದು ವ್ಯಕ್ತಿ ಸಾವು

ಶಿವಮೊಗ್ಗ: ಅಡಿಕೆ ಔಷಧಿ ಸಿಂಪಡಿಸುವಾಗ ಮರದಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ನೂಲಿಗ್ಗೇರಿಯಲ್ಲಿ ನಡೆದಿದೆ.

ಅರಮನೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತ್ತಿಮನೆ ನಿವಾಸಿ ಕೃಷಿ ಕಾರ್ಮಿಕ ಸಾಧಿಕ್(42) ಮೃತಪಟ್ಟವರು. ಸೋಮವಾರ ಸಾಧಿಕ್ ಮತ್ತು ಮಂಜುನಾಥ್ ಅವರು ಅಬ್ಬಾಸ್ ಅವರ ಅಡಿಕೆ ತೋಟಕ್ಕೆ ಔಷಧ ಸಿಂಪಡಿಸಲು ಹೋಗಿದ್ದರು. ಕೆಲಸದ ವೇಳೆ ಆಕಸ್ಮಿಕವಾಗಿ ಸಾಧಿಕ್ ಮರದಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅವರ ಬೆನ್ನು, ಕುತ್ತಿಗೆ ಭಾಗಕ್ಕೆ ಪೆಟ್ಟು ಬಿದ್ದಿದ್ದು, ಹೊಸನಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಯೆನೆಪೋಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆದರೆ ಚಿಕಿತ್ಸೆ ಫಲಕಾರಿಯಾಗಿಲ್ಲ. ಸಾಧಿಕ್ ಚೇತರಿಸಿಕೊಂಡಿಲ್ಲ. ಕುಟುಂಬದವರು ಸಾಧಿಕ್ ಅವರನ್ನು ಮನೆಗೆ ಕರೆದುಕೊಂಡು ಬರುವಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ. ಮೃತ ಸಾಧಿಕ್ ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read