ಬೆಂಗಳೂರು: ಕರ್ನಾಟಕ ಸರ್ಕಾರದ ಆದೇಶ ಸಂಖ್ಯೆ: ಇಡಿ 57 ಟಿಇಸಿ 2025 ದಿನಾಂಕ:19.05.2025 ಹಾಗೂ ಯುಜಿಸಿ-ನೆಟ್ ಬ್ಯೂರೋ ನವದೆಹಲಿ ರವರ ಪತ್ರ ಸಂಖ್ಯೆ:ಎಸ್.7-16/2012(ನೆಟ್/ಸೆಟ್) ದಿನಾಂಕ:06.09.2023 ರ ನಿರ್ದೇಶನದಂತೆ, ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2025 (ಕೆಸೆಟ್-2025) ಅನ್ನು 02.11.2025 (ಭಾನುವಾರ) ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲು ಯೋಜಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ಕೆಸೆಟ್-2025 ಪರೀಕ್ಷೆಯ ವೇಳಾಪಟ್ಟಿ ಈ ಕೆಳಗಿನಂತಿದೆ.
1) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ
: 28.08.2025
2) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ : 18.09.2025
3) ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ
: 19.09.2025
4) ಪ್ರವೇಶ ಪತ್ರ (Hall Ticket) ಬಿಡುಗಡೆ ದಿನಾಂಕ
: 24.10.2025
5) ಪರೀಕ್ಷಾ ದಿನಾಂಕ
: 02.11.2025
KSET-25: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯು ನ.2ರಂದು ನಡೆಯಲಿದ್ದು, ಇದಕ್ಕೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆ.28ರಿಂದ ಆರಂಭಗೊಳ್ಳಲಿದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ
ಅರ್ಜಿ ಸಲ್ಲಿಸಲು ಸೆ.18 ಕೊನೆಯ ದಿನವಾಗಿದ್ದು, ಅರ್ಜಿ ಶುಲ್ಕ ಪಾವತಿಗೆ ಸೆ.19ರವರೆಗೆ ಅವಕಾಶವಿರುತ್ತದೆ. ಅ.24ರಂದು ಪ್ರವೇಶ ಪತ್ರ (ಹಾಲ್ ಟಿಕೆಟ್) ಬಿಡುಗಡೆಯಾಗಲಿದೆ. ಆನ್ ಲೈನ್ ಮೂಲಕ ಮಾತ್ರವೇ ಅರ್ಜಿ ಸಲ್ಲಿಸಬಹುದಾಗಿದ್ದು, ಇತರ ಯಾವುದೇ ವಿಧದಲ್ಲಿ ಅರ್ಜಿ ಸ್ವೀಕರಿಸುವುದಿಲ್ಲ.
#KeanuReeves ವೆಬ್ ಸೈಟ್ https://cetonline.karnataka.gov.in/kea/ ಅನ್ನು ಪ್ರವೇಶಿಸುವ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬಹುದು.
ಒಟ್ಟು 33 ವಿಷಯಗಳಿಗೆ ಪರೀಕ್ಷೆ ನಡೆಯಲಿದೆ.
ಅಧಿಸೂಚನೆಯ ಕನ್ನಡ ಲಿಂಕ್
English link of a Notification
#KSET-25: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯು ನ.2ರಂದು ನಡೆಯಲಿದ್ದು, ಇದಕ್ಕೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆ.28ರಿಂದ ಆರಂಭಗೊಳ್ಳಲಿದೆ.
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) August 22, 2025
ಅರ್ಜಿ ಸಲ್ಲಿಸಲು ಸೆ.18 ಕೊನೆಯ ದಿನವಾಗಿದ್ದು, ಅರ್ಜಿ ಶುಲ್ಕ ಪಾವತಿಗೆ ಸೆ.19ರವರೆಗೆ ಅವಕಾಶವಿರುತ್ತದೆ. ಅ.24ರಂದು ಪ್ರವೇಶ ಪತ್ರ (ಹಾಲ್ ಟಿಕೆಟ್)…