ಬಿಡುವಿಲ್ಲದ ಕಾರ್ಯದೊತ್ತಡದ ನಡುವೆಯೂ ಉಮಾಶ್ರೀ ಅಭಿನಯದ ‘ಶರ್ಮಿಷ್ಠೆ’ ನಾಟಕ ನೋಡಿದ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವಿಧಾನ ಪರಿಷತ್ ಸದಸ್ಯೆ, ಹಿರಿಯ ನಟಿ ಉಮಾಶ್ರೀ ಅವರ ಏಕ ವ್ಯಕ್ತಿ ಅಭಿನಯದ “ಶರ್ಮಿಷ್ಠೆ” ನಾಟಕ ಪ್ರದರ್ಶನವಾಗಿದ್ದು, ಸಿಎಂ ಸಿದ್ಧರಾಮಯ್ಯ ವೀಕ್ಷಿಸಿದ್ದಾರೆ.

ಸಕ್ರಿಯ ರಾಜಕಾರಣದಲ್ಲಿದ್ದುಕೊಂಡು ಜನಸೇವೆ ಮಾಡುವ ಜೊತೆಗೆ ಆಗಾಗ್ಗೆ ಧಾರವಾಹಿ, ಚಲನಚಿತ್ರ, ನಾಟಕಗಳಲ್ಲಿ ಅಭಿನಯಿಸುತ್ತಾ ಕಲಾಸೇವೆ ಮಾಡುವ ಉಮಾಶ್ರೀ ಅವರು ನಾಡಿನ ಹೆಮ್ಮೆಯ ಕಲಾವಿದೆ.

ಇಂದಿನ ಶರ್ಮಿಷ್ಠೆ ನಾಟಕದಲ್ಲಿ ಅವರ ಅಭಿಯನ ಮನೋಜ್ಞವಾಗಿತ್ತು. ಕಲಾಸರಸ್ವತಿಯ ಒಲವು ಅವರ ಮೇಲಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಹೀಗೆಯೇ ಜನಸೇವೆಯ ಜೊತೆಗೆ ಕಲಾಸೇವೆಯ ಅವರ ಕಾರ್ಯ ಯಾವ ಅಡೆತಡೆಗಳಿಲ್ಲದೆ ಸಾಗಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.

ಬೇಲೂರು ರಘುನಂದನ್ ಅವರ ಈ ನಾಟಕಕ್ಕೆ ಚಿದಂಬರರಾವ್ ಜಂಬೆ ವಿನ್ಯಾಸ, ನಿರ್ದೇಶನವಿದೆ. ಅನೂಪ್ ಶೆಟ್ಟಿ ಸಂಗೀತ ವಿನ್ಯಾಸ, ಶಿವಲಿಂಗ ಪ್ರಸಾದ್ ಸಂಗೀತ ನಿರ್ವಹಣೆ, ಪ್ರಮೋದ್ ಶಿಗ್ಗಾಂವ್ ರಂಗಸಜ್ಜಿಕೆ, ವಸ್ತ್ರವಿನ್ಯಾಸವಿದೆ

ಕನ್ನಡ ರಂಗಭೂಮಿ, ಕಿರುತೆರೆ, ಬೆಳ್ಳಿತೆರೆ ಕ್ಷೇತ್ರದ ಅಭಿಜಾತ ಕಲಾವಿದೆ ಉಮಾಶ್ರೀ ಅವರು 4 ದಶಕಕ್ಕೂ ಹೆಚ್ಚು ಕಾಲದಿಂದ ಕನ್ನಡ ರಂಗಭೂಮಿ ಕ್ಷೇತ್ರದಲ್ಲಿ ಅನುಪಮವಾದ ಸೇವೆ ಸಲ್ಲಿಸುತ್ತಿರುವ ಉಮಾಶ್ರೀ ಅವರು ಭಾರತೀಯ ಅಭಿನಯ ಪರಂಪರೆಯಲ್ಲಿ ಒಂದು ಅಮೂಲ್ಯ ಮಾದರಿ. ರಂಗಭೂಮಿ ಹಾಗೂ ಚಲನಚಿತ್ರ ರಂಗದಲ್ಲಿ ವಿಭಿನ್ನ ರೀತಿಯ ಮತ್ತು ಸಂವೇದನಾಶೀಲ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಹೀಗೆ ಹಲವಾರು ನಾಟಕಗಳಲ್ಲಿ ಅಭಿನಯಿಸಿ ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ. ರಂಗ ಸಂಪದ ಮೂಲಕ ಹವ್ಯಾಸಿ ರಂಗಭೂಮಿಯಲ್ಲಿ ಮನ್ನಣೆ ಪಡೆದ ಉಮಾಶ್ರೀ ಅವರು ಈಗ ಇದೇ ತಂಡದ ಮೂಲಕ ಶರ್ಮಿಷ್ಠೆಯಾಗಿ ಕಾಣಿಸಿಕೊಂಡಿದ್ದು, ಏಕವ್ಯಕ್ತಿ ರಂಗಪ್ರಯೋಗ ಇದಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read