LPG ಗ್ರಾಹಕರಿಗೆ ಗುಡ್ ನ್ಯೂಸ್: ಗ್ಯಾಸ್ ಸಿಲಿಂಡರ್ ಡೆಲಿವರಿಗೆ ಹೆಚ್ಚಿನ ಹಣ ಕೇಳಿದಲ್ಲಿ ದೂರು ಕೊಡಿ

ಅಡುಗೆ ಅನಿಲದ ಸಿಲಿಂಡರನ್ನು ಮನೆಗೆ ಸರಬರಾಜು ಮಾಡುವ ಡೆಲಿವರಿ ಹುಡುಗರಿಗೆ ಗ್ರಾಹಕರು ಡೆಲಿವರಿಗೆ ಶುಲ್ಕ ನೀಡುವ ಅಗತ್ಯವಿಲ್ಲ.

ಬಿಲ್ ನಲ್ಲಿ ನಮೂದಿಸಿರುವ ಮೊತ್ತವನ್ನು ಮಾತ್ರ ನೀಡುವಂತೆ ತಿಳಿಸಿದೆ. ಗ್ಯಾಸ್ ಏಜೆನ್ಸಿಗಳು ಗೃಹ ಬಳಕೆಯ ಅನಿಲ ಸಿಲಿಂಡರನ್ನು ನೇರವಾಗಿ ಗೋದಾಮಿನಿಂದ ಗ್ರಾಹಕರಿಗೆ ಸರಬರಾಜು ಮಾಡತಕ್ಕದ್ದು, ಯಾವುದೇ ಕಾರಣಕ್ಕಾಗಿಯೂ ಅನಿಲ ಸಿಲಿಂಡರನ್ನು ರಸ್ತೆ ಬದಿಯಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ, ಮೈದಾನಗಳಲ್ಲಿ ಇಟ್ಟು ಮಾರಾಟ ಮಾಡತಕ್ಕದ್ದಲ್ಲ.

ಸರ್ಕಾರದ ಆದೇಶದನ್ವಯ ಈ ಕೆಳಗಿನಂತೆ ಗೃಹೊಪಯೋಗಿ ಗ್ಯಾಸ್ ಸಿಲಿಂಡರ್ ಗೆ ನಾಗರಿಕ ತಿದ್ದುಪಡಿಯಲ್ಲಿ ನಿಗಧಿಪಡಿಸಿರುವಂತೆ Up to 5.00 kms free (no charges), Beyond 5 kms for every round trip km- Rs.1.60 per cylinder (Rs. One Rupee sixty paise only)  ಸಿಲಿಂಡರನ್ನು ಮನೆಗೆ ತಲುಪಿಸುವ ಸಂದರ್ಭದಲ್ಲಿ ಯಾವುದೇ ಡೆಲಿವರಿ ಹುಡುಗ ಬಿಲ್ಲಿನಲ್ಲಿ ನಮೂದಿಸಿದ ಮೊತ್ತಕ್ಕಿಂತ ಹೆಚ್ಚಿನ ಹಣ ಕೇಳಿದಲ್ಲಿ, ಜಂಟಿ ನಿರ್ದೇಶಕರ ಕಚೇರಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಹಾಸನ ಕಾರ್ಯಾಲಯಕ್ಕೆ ಹಾಗೂ ಕಚÉÃರಿಯ ದೂರವಾಣಿ ಸಂಖ್ಯೆ 08172-268229 ಮತ್ತು ಆಯಾ ತಾಲ್ಲೂಕಿನ ತಹಶೀಲ್ದಾರರ ಕಚೇರಿಯ ಆಹಾರ ಶಾಖೆಗೆ ದೂರು ಸಲ್ಲಿಸುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read