HomeLatest Newsಶೇ. 50ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಶಾಲೆ, ಕಾಲೇಜುಗಳ ಅತಿಥಿ ಶಿಕ್ಷಕರು, ಉಪನ್ಯಾಸಕರು ಮನೆಗೆ

ಶೇ. 50ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಶಾಲೆ, ಕಾಲೇಜುಗಳ ಅತಿಥಿ ಶಿಕ್ಷಕರು, ಉಪನ್ಯಾಸಕರು ಮನೆಗೆ

ಬೆಂಗಳೂರು: ಶೇಕಡ 50ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಬಿಬಿಎಂಪಿಯ ಶಾಲಾ, ಕಾಲೇಜುಗಳಲ್ಲಿ ಪ್ರಸಕ್ತ ಸಾಲಿಗೆ ನಿಯೋಜನೆ ಮಾಡಿಕೊಂಡಿದ್ದ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಪೈಕಿ 72 ಮಂದಿಯ ನಿಯೋಜನೆ ರದ್ದು ಮಾಡಲಾಗಿದೆ.

ಇವರಲ್ಲಿ 35 ಅತಿಥಿ ಶಿಕ್ಷಕರು, ಉಪನ್ಯಾಸಕರು ನಿಗದಿತ ವಿದ್ಯಾರ್ಹತೆ ಹೊಂದಿಲ್ಲ. ಉಳಿದ 37 ಮಂದಿ ಕಳೆದ ಮೂರು ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇಕಡ 50 ಕ್ಕಿಂತ ಕಡಿಮೆ ಫಲಿತಾಂಶ ನೀಡಿದ್ದಾರೆ. ಹೀಗಾಗಿ ಗೌರವಧನ ಮಂಜೂರಾತಿಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ಅ

ತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಮಾತ್ರ ಶಿಕ್ಷೆ ನೀಡುತ್ತಿಲ್ಲ. ಬಿಬಿಎಂಪಿ ಶಾಲಾ ಕಾಲೇಜಿನ ಕಾಯಂ ಶಿಕ್ಷಕರು ಉಪನ್ಯಾಸಕರಿಗೂ ಬಡ್ತಿ ತಡೆ, ವರ್ಗಾವಣೆ ಶಿಕ್ಷೆ ವಿಧಿಸಲು ತೀರ್ಮಾನಿಸಲಾಗಿದೆ. ಈ ಕುರಿತು ಮುಖ್ಯ ಆಯುಕ್ತರಿಗೆ ಶೀಘ್ರದಲ್ಲಿ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ಸಾಲಿನಲ್ಲಿ ಬಿಬಿಎಂಪಿಯ ಶಾಲಾ, ಕಾಲೇಜುಗಳಿಗೆ ಶಿಕ್ಷಣ ಇಲಾಖೆ ಮಾದರಿಯಲ್ಲಿ ಎಸ್‌ಡಿಎಂಸಿ ಮತ್ತು ಸಿಡಿಸಿ ಮೂಲಕ ಅತಿಥಿ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಅದೇ ರೀತಿ ಈ ಬಾರಿಯೂ 804 ಮಂದಿ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ನಿಯೋಜನೆಗೊಂಡ 804 ಮಂದಿಯಲ್ಲಿ 35 ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರು ವಿದ್ಯಾರ್ಥಿ ಹೊಂದಿಲ್ಲದಿರುವುದು ದಾಖಲಾತಿಯ ಪರಿಶೀಲನೆಯ ವೇಳೆ ಕಂಡು ಬಂದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular