ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದಲ್ಲಿ ಮತ್ತೆ ಬೀದಿನಾಯಿಗಳ ಅಟ್ಟಹಾಸ ಮುಂದುವರೆದಿದೆ. ಶುಕ್ರವಾರ 5 ವರ್ಷದ ಬಾಲಕಿ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿವೆ.
ಬಿಜಿಎಸ್ ಶಾಲೆಯಲ್ಲಿ ಎಲ್.ಕೆ.ಜಿ. ಓದುತ್ತಿರುವ ಬಾಲಕಿ ಜವೇರಿಯಾ ಸುಲ್ತಾನಾ ಅಂಗಡಿಗೆ ತೆರಳುವಾಗ ಬೀದಿ ನಾಯಿಗಳು ಹಿಂಬಾಲಿಸಿಕೊಂಡು ಬಂದು ದಾಳಿ ಮಾಡಿವೆ. ಗಾಯಗೊಂಡ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತೀಚೆಗಷ್ಟೇ ನೆಹರು ಕ್ರೀಡಾಂಗಣದಲ್ಲಿ ಬಾಲಕನ ಮೇಲೆ 15ಕ್ಕೂ ಹೆಚ್ಚು ಬೀದಿ ನಾಯಿಗಳು ದಾಳಿ ಮಾಡಿ ಗಾಯಗೊಳಿಸಿದ್ದವು. ಈ ಘಟನೆ ಮಾಸುವ ಮೊದಲೇ ಶಿಡ್ಲಘಟ್ಟದ 20ನೇ ವಾರ್ಡ್ ನಲ್ಲಿ ಬಾಲಕಿ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ. ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ. ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಲಾಗಿದೆ.