HomeLatest Newsವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲು ವಿಶೇಷ ಆಧಾರ್ ಸೀಡಿಂಗ್ ಅಭಿಯಾನ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲು ವಿಶೇಷ ಆಧಾರ್ ಸೀಡಿಂಗ್ ಅಭಿಯಾನ

ಬೆಂಗಳೂರು: ಆಗಸ್ಟ್ 25ರಿಂದ ಸೆಪ್ಟೆಂಬರ್ 7ರವರೆಗೆ “ವಿಶೇಷ ಆಧಾರ್ ಸೀಡಿಂಗ್ ಅಭಿಯಾನ“ ಕಾರ್ಯಕ್ರಮವನ್ನು  ಜಿಲ್ಲೆ / ತಾಲ್ಲೂಕು ಮಟ್ಟದಲ್ಲಿ ಹಮ್ಮಿಕೊಳ್ಳಲಾಗಿದೆ.

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ /ಪ್ರೋತ್ಸಾಹಧನವನ್ನು ಮಂಜೂರು ಮಾಡಲು ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗದೇ ಬಾಕಿ ಇರುವ ಅರ್ಜಿಗಳಿಗೆ ಆಧಾರ್ ಸೀಡಿಂಗ್ ಮಾಡುವ ಕಾರ್ಯವನ್ನು ಪೂರ್ಣಗೊಳಿಸಲು ಆಗಸ್ಟ್ 25, 2025 ರಿಂದ ಸೆಪ್ಟೆಂಬರ್ 07,2025ರವರೆಗೆ “ವಿಶೇಷ ಆಧಾರ್ ಸೀಡಿಂಗ್ ಅಭಿಯಾನ“ ಕಾರ್ಯಕ್ರಮವನ್ನು  ಜಿಲ್ಲೆ / ತಾಲ್ಲೂಕು ಮಟ್ಟದಲ್ಲಿ ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಈ ಅಭಿಯಾನವನ್ನು ಸದುಪಯೋಗಪಡಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ನಂ.21/1, 1ನೇ ಮಹಡಿ, ಜೆಲ್ಲೇಟಾ ಟವರ್, ಮಿಷನ್ ರಸ್ತೆ, ಸಂಪಂಗಿರಾಮನಗರ, ಬೆಂಗಳೂರು. ದೂರವಾಣಿ ಸಂಖ್ಯೆ: 080-22240449, 9480843019. ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಉತ್ತರ ತಾಲ್ಲೂಕು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪಕ್ಕ, ಯಲಹಂಕ, ಬೆಂಗಳೂರು, ದೂರವಾಣಿ ಸಂಖ್ಯೆ: 080-28461351, 9480843051. ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ತಾಲ್ಲೂಕು, ಎಸ್. ಕರಿಯಪ್ಪ ರಸ್ತೆ, ಕನಕಪುರ ಮುಖ್ಯರಸ್ತೆ, ಬನಶಂಕರಿ, ಬೆಂಗಳೂರು.  ದೂರವಾಣಿ ಸಂಖ್ಯೆ: 080-29711096, 9480843050. ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಪೂರ್ವ ತಾಲ್ಲೂಕು, ಟಿ.ಸಿ ಪಾಳ್ಯ ಮುಖ್ಯ ರಸ್ತೆ, ಬೆಂಗಳೂರು. ದೂರವಾಣಿ ಸಂಖ್ಯೆ: 080-29535045, 9480843049. ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಆನೇಕಲ್, ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್, ಬಸ್ಟಾಂಡ್ ಹಿಂಭಾಗ, ಬೆಂಗಳೂರು, ದೂರವಾಣಿ ಸಂಖ್ಯೆ:080-27859557, 9480843052 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular