ಚಿತ್ರದುರ್ಗ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗದ ಕಾವಾಡಿಗರ ಹಟ್ಟಿಯಲ್ಲಿ ನಡೆದಿದೆ.
ನೇತ್ರಾ (30) ಆತ್ಮಹತ್ಯೆ ಮಾಡಿಕೊಂಡವರು. ಮೈಕ್ರೋ ಫೈನಾನ್ಸ್ ನಲ್ಲಿ ನೇತ್ರಾ 50 ಸಾವಿರ ಸಾಲ ಮಾಡಿದ್ದರಂತೆ. ಸಾಲ ಮರುಪಾವತಿಗಾಗಿ ಸಿಬ್ಬಂದಿ ಕಿರುಕುಳ ನೀಡುತ್ತಿದ್ದರಂತೆ.
ಇದರಿಂದ ನೊಂದ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.