BREAKING : ರಾಜ್ಯದ ಎಲ್ಲಾ ಶಾಲೆಗಳು ತುರ್ತಾಗಿ ಈ ಮಾಹಿತಿ ಸಲ್ಲಿಸುವಂತೆ ಸರ್ಕಾರದಿಂದ ಮಹತ್ವದ ಆದೇಶ.!

ಬೆಂಗಳೂರು : ತುರ್ತಾಗಿ ಈ ಮಾಹಿತಿ ಸಲ್ಲಿಸುವಂತೆ ರಾಜ್ಯದ ಎಲ್ಲಾ ಶಾಲೆಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ಸಭಾ ಸೂಚನಾ ಪತ್ರದಂತೆ 2025-26ನೇ ಸಾಲಿನ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ರಾಜ್ಯ ಮಟ್ಟದ ಜಾಗೃತಿ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯನ್ನು ದಿನಾಂಕ:25-08-2025 ರಂದು ಹಮಿಕೊಳ್ಳಲಾಗಿದ್ದು,

ಸದರಿ ಸಭೆಗೆ ಸಂಬಂಧಿಸಿದಂತೆ ಸರ್ಕಾರಿ ಪ್ರೌಢ ಶಾಲಾ ಶಿಕ್ಷಕರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಂದ ಅಟ್ರಾಸಿಟಿ ಪ್ರಕರಣಗಳು ದಾಖಲಾಗಿದ್ದಲ್ಲಿ ವಿವರವನ್ನು ಸಭೆಗೆ ಮಾಹಿತಿಯನ್ನು ಒದಗಿಸಬೇಕಾಗಿರುವುದರಿಂದ ಸದರಿ ಮಾಹಿತಿಯನ್ನು ಈ ಕೆಳಗಿನ ನಮೂನೆಯಲ್ಲಿ ತಪ್ಪದೇ ಈ ಮೇಲ್ ವಿಳಾಸ est4cpibng@gmail.com ಕಳುಹಿಸಲು ತಿಳಿಸಿದೆ. ಒಂದು ವೇಳೆ ಜಿಲ್ಲೆಯಲ್ಲಿ ಪ್ರೌಢ ಶಾಲಾ ಶಿಕ್ಷಕರಿಗೆ ಸಂಬಂಧಿಸಿದ ಯಾವುದೇ ಪ್ರಕರಣಗಳು ಇರದೇ ಇದ್ದಲ್ಲಿ ಶೂನ್ಯ ವರದಿಯನ್ನು ಸಲ್ಲಿಸುವುದು ಎಂದು ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read