ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಏಳು ಮಂದಿ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಸೆ. 9 ರವರೆಗೆ ವಿಸ್ತರಣೆ ಮಾಡಲಾಗಿದೆ. ಅದೇ ರೀತಿ ಜೈಲು ವರ್ಗಾವಣೆ ಅರ್ಜಿ ವಿಚಾರಣೆಯನ್ನು ಕೂಡ ಸೆಷನ್ಸ್ ಕೋರ್ಟ್ ಆಗಸ್ಟ್ 30 ಕ್ಕೆ ಮುಂದೂಡಿದೆ.
ಪರಪ್ಪನ ಅಗ್ರಹಾರ ಜೈಲಿನಿಂದ ಬೇರೆ ಜೈಲಿಗೆ ವರ್ಗಾಯಿಸುವಂತೆ ದರ್ಶನ್ ಹಾಗೂ ನಾಗರಾಜ್, ಲಕ್ಷ್ಮಣ್, ಪ್ರದೂಷ್, ಜಗದೀಶ್ ಸೇರಿದಂತೆ ಐವರು ಆರೋಪಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು 64ನೇ ಸಿಸಿಹೆಚ್ ಕೋರ್ಟ್ನಲ್ಲಿ ನಡೆಯಿತು. ಈ ವೇಳೆ, ಜೈಲು ವರ್ಗಾವಣೆಗೆ ಪ್ರದೋಷ್ ಅವರ ವಕೀಲರು ಆಕ್ಷೇಪಣೆ ಸಲ್ಲಿಸಿದರು. ಇದರ ಬಗ್ಗೆ ಪ್ರತಿಕ್ರಿಯೆ ನೀಡಲು ದರ್ಶನ್, ಪವಿತ್ರಾ ಗೌಡ ಮತ್ತು ಇತರ ಆರೋಪಿಗಳ ವಕೀಲರು ನ್ಯಾಯಾಲಯದಲ್ಲಿ ಸಮಯ ಕೋರಿದರು. ಆದ್ದರಿಂದ ಜೈಲು ವರ್ಗಾವಣೆ ಅರ್ಜಿ ವಿಚಾರಣೆಯನ್ನು ಸೆಷನ್ಸ್ ಕೋರ್ಟ್ ಆಗಸ್ಟ್ 30 ಕ್ಕೆ ಮುಂದೂಡಿದೆ.