ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಹೇಶ್ ತಿಮರೋಡಿಗೆ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.
ಉಡುಪಿ ಜಿಲ್ಲೆಯ ಬ್ರಹ್ಮಾವರ ಸಂಚಾರಿ ಪೀಠ, ಮಹೇಶ್ ತಿಮರೋಡಿ ಅವರಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಮೊನ್ನೆ ಉಜಿರೆ ನಿವಾಸದಲ್ಲಿ ತಿಮರೋಡಿಯನ್ನು ಪೊಲೀಸರು ಬಂಧಿಸಿದ್ದರು.