HomeLatest Newsವರಮಹಾಲಕ್ಷ್ಮಿ ಹಬ್ಬಕ್ಕೆ ಬ್ಯಾಂಕ್ ಲಾಕರ್ ನಿಂದ ತಂದಿದ್ದ ಒಂದು ಕೆಜಿ ಚಿನ್ನ, 15 ಲಕ್ಷ ನಗದು...

ವರಮಹಾಲಕ್ಷ್ಮಿ ಹಬ್ಬಕ್ಕೆ ಬ್ಯಾಂಕ್ ಲಾಕರ್ ನಿಂದ ತಂದಿದ್ದ ಒಂದು ಕೆಜಿ ಚಿನ್ನ, 15 ಲಕ್ಷ ನಗದು ಕಳವು

ಹಾಸನ: ಹಾಸನದ ಸದಾಶಿವ ನಗರದ ಖಾಸಗಿ ಬ್ಯಾಂಕ್ ನೌಕರರೊಬ್ಬರ ಮನೆಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಕಳವು ಮಾಡಲಾಗಿದೆ.

ನವೀನ್ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದೆ. ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಬ್ಯಾಂಕ್ ಲಾಕರ್ ನಿಂದ ಒಂದು ಕೆಜಿ ಚಿನ್ನ, 15 ಲಕ್ಷಕ್ಕೂ ಹೆಚ್ಚು ನಗದನ್ನು ಪೂಜೆಗೆ ತರಲಾಗಿತ್ತು. ಗುರುವಾರ ರಾತ್ರಿ ನವೀನ್ ಕುಟುಂಬದವರು ಮನೆಗೆ ಬೀಗ ಹಾಕಿ ಹೊರಗೆ ಹೋಗಿದ್ದರು. ಆಗಸ್ಟ್ 23ರ ಶನಿವಾರ ಬೆಳಗ್ಗೆ ಮನೆಗೆ ಬಂದು ನೋಡಿದಾಗ ಬಾಗಿಲು ಮುರಿದು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.

ನವೀನ್ ಹೊಸ ಮನೆ ನಿರ್ಮಾಣ ಮಾಡುತ್ತಿದ್ದು, ಇದಕ್ಕಾಗಿ ಹಣವನ್ನು ಕೂಡಿಸಿ ಮನೆಯಲ್ಲಿಟ್ಟಿದ್ದರು. ಆದರೆ ಕಳ್ಳರು ಹಣ ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು, ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular