ಉಡುಪಿ: ಬಿಜೆಪಿ ನಾಯಕ ಬಿ.ಎಲ್. ಸಂತೋಷ್ ಅವರ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಉಡುಪಿ ಜಿಲ್ಲಾ ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದೆ.
ಉಡುಪಿಯಲ್ಲಿ ಜಾಮೀನು ದೊರೆತ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಹೇಶ್ ತಿಮರೋಡಿ, ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಹೇಳಿದ್ದಾರೆ.
ಸಹಕಾರ ನೀಡಿದ ವಕೀಲರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಮಾಸ್ಕ್ ಮ್ಯಾನ್ ಚಿನ್ನಯ್ಯ ಬಂಧನದ ಬಗ್ಗೆ ನನಗೆ ಗೊತ್ತಿಲ್ಲ. ಸುಜಾತಾ ಭಟ್ ಕುರಿತು ಏನನ್ನೂ ಹೇಳುವುದಿಲ್ಲ. ನಮ್ಮನ್ನು ಯಾರೂ ಕೂಡ ದಿಕ್ಕು ತಪ್ಪಿಸಲು ಸಾಧ್ಯವಿಲ್ಲ. ಅಣ್ಣಪ್ಪ, ಮಂಜುನಾಥ ಸ್ವಾಮಿ ಮಾತ್ರ ಸಾಧ್ಯ ಎಂದು ಹೇಳಿದ್ದಾರೆ.
ಇಂದು ಎಲ್ಲವೂ ಒಳ್ಳೆಯ ರೀತಿಯಲ್ಲಿ ಆಗಿದೆ. ಸುಜಾತ ಭಟ್ ಅವರು ನಮ್ಮ ಹೋರಾಟದಲ್ಲಿಯೇ ಇಲ್ಲ. ನಾವು ಸುಜಾತಾ ಭಟ್ ಅವರನ್ನು ನಂಬಿದವರಲ್ಲ ಎಂದು ಹೇಳಿದ್ದಾರೆ.