ಚಿಕ್ಕಮಗಳೂರು: ಲಾಡ್ಜ್ ಗೆ ಬಾಲಕಿ ಕರೆದೊಯ್ದು ಅತ್ಯಾಚಾರ ಎಸೆಸಗಿದ ಪ್ರಕರಣದಲ್ಲಿ ಇಬ್ಬರಿಗೆ ತಲಾ 10 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ.
ಚಿಕ್ಕಂಗಳ ಗ್ರಾಮದ ಕಿರಣ್ ನಾಯಕ್(21), ಅಭಿಷೇಕ್ ನಾಯಕ್(22) ಶಿಕ್ಷೆಗೊಳಗಾದವರು. 2023ರಲ್ಲಿ ಕಡೂರು ತಾಲೂಕಿನ ಬಾಲಕಿಯನ್ನು ಬೆದರಿಸಿ ಲಾಡ್ಜ್ ಗೆ ಕರೆದುಕೊಂಡು ಹೋಗಿದ್ದ ಆರೋಪಿಗಳು ಲೈಂಗಿಕ ದೌರ್ಜನ್ಯ ಎಸಗಿದ್ದರು.
ಬಾಲಕಿ ಪೋಷಕರಿಗೆ ಮಾಹಿತಿ ನೀಡಿದ್ದು, ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪಿಗಳನ್ನು ಬಂಧಿಸಲಾಗಿತ್ತು. ವಿಚಾರಣೆಯ ವೇಳೆ ಕೃತ್ಯ ಎಸಗಿದ್ದನ್ನು ಆರೋಪಿಗಳು ಒಪ್ಪಿಕೊಂಡಿದ್ದು, ಚಿಕ್ಕಮಗಳೂರು ಪೋಕ್ಸೋ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗಳಿಬ್ಬರಿಗೆ ತಲಾ 10 ವರ್ಷ ಜೈಲು ಶಿಕ್ಷೆ ಹಾಗೂ ಕಿರಣ್ ನಾಯಕ್ ಗೆ 40 ಸಾವಿರ ರೂ., ಅಭಿಷೇಕ್ ನಾಯಕ ಗೆ 11 ಸಾವಿರ ರೂ., ದಂಡ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರಿ ಅಭಿಯೋಜಕ ಭರತ್ ವಾದ ಮಂಡಿಸಿದ್ದರು.