ಚಾಮರಾಜನಗರ: ಯೂಟ್ಯೂಬರ್ ಸಮೀರ್ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸಾಮಾಜಿಕ ಜಾಲತಾಣದ ಮೂಲಕ ಸಮಾಜದ ಸ್ವಾಸ್ಥ್ಯ ಕಳೆಯುವುದು, ಅಪಪ್ರಚಾರ ನಡೆಸುತ್ತಿರುವ ಆರೋಪದಡಿ ವೃಷಭೇಂದ್ರ ಅವರು ಹನೂರು ಠಾಣೆಗೆ ದೂರು ನೀಡಿದ್ದಾರೆ. ಅವರ ದೂರಿನ ಆಧಾರದ ಮೇಲೆ ಸಮೀರ್ ವಿರುದ್ಧ ಪ್ರಕರಣ ದಾಖಲಾಗಿದೆ.
ಧರ್ಮಸ್ಥಳಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ. ನಿರೀಕ್ಷಣಾ ಜಾಮೀನಿನ ಮೇಲೆ ಹೊರಗಿದ್ದಾರೆ. ಹೀಗಿರುವಾಗಲೇ ಅವರಿಗೆ ವಿರುದ್ಧ ವಿವಿಧೆಡೆ ದೂರು ದಾಖಲಾಗಿವೆ. ಚಿಕ್ಕಮಗಳೂರು ಜಿಲ್ಲೆ ಕಡೂರು ಪೊಲೀಸ್ ಠಾಣೆಯಲ್ಲಿ ಮಂಜು ಜೈನ್ ದೂರು ದಾಖಲಿಸಿದ್ದಾರೆ. ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿ ನಮ್ಮ ಭಾವನೆಗೆ ಧಕ್ಕೆ ತಂದಿದ್ದು, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದೆ. ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ಸಮೀರ್ ಗೆ ನಿರೀಕ್ಷಣಾ ಜಾಮೀನು ನೀಡಿದೆ. ಈ ನಡುವೆ ನಾಳೆ ವಿಚಾರಣೆಗೆ ಬರುವಂತೆ ಪೊಲೀಸರು ಸೂಚನೆ ನೀಡಿದ್ದಾರೆ.