HomeLatest Newsಟಿಕೆಟ್ ದರ ಭಾರಿ ಏರಿಕೆ ಮಾಡಿ ಖಾಸಗಿ ಬಸ್ ಗಳಿಂದ ಪ್ರಯಾಣಿಕರ ಸುಲಿಗೆಗೆ ಬ್ರೇಕ್: ಸಚಿವ...

ಟಿಕೆಟ್ ದರ ಭಾರಿ ಏರಿಕೆ ಮಾಡಿ ಖಾಸಗಿ ಬಸ್ ಗಳಿಂದ ಪ್ರಯಾಣಿಕರ ಸುಲಿಗೆಗೆ ಬ್ರೇಕ್: ಸಚಿವ ರಾಮಲಿಂಗಾರೆಡ್ಡಿ ಖಡಕ್ ಸೂಚನೆ

ಬೆಂಗಳೂರು: ಗೌರಿ -ಗಣಪತಿ ಹಬ್ಬ ಮತ್ತು ವಾರಾಂತ್ಯ ರಜೆ ಹಿನ್ನೆಲೆಯಲ್ಲಿ ಸಾಲು ಸಾಲಾಗಿ ಜನ ಊರಿಗೆ ಹೊರಟಿದ್ದಾರೆ. ಇದನ್ನೇ ಬಳಸಿಕೊಂಡ ಖಾಸಗಿ ಬಸ್ ಗಳು ಪ್ರಯಾಣಿಕರಿಂದ ಸುಲಿಗೆ ಮಾಡುತ್ತಿದ್ದು, ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ.

ಹಬ್ಬದ ನೆಪದಲ್ಲಿ ಖಾಸಗಿ ಬಸ್ ಗಳು ಬೇಕಾಬಿಟ್ಟಿಯಾಗಿ ಟಿಕೆಟ್ ದರ ಏರಿಕೆ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಕೆಎಸ್ಆರ್ಟಿಸಿಯಿಂದ ಹೆಚ್ಚುವರಿಗಾಗಿ 1500 ಬಸ್ ಸೇವೆ ಒದಗಿಸಲಾಗಿದೆ. ಅದೇ ರೀತಿ ಕಲ್ಯಾಣ ಕರ್ನಾಟಕ ಸಾರಿಗೆ ವಾಯುವ್ಯ ಸಾರಿಗೆ ಬಸ್ ಗಳು ಹೆಚ್ಚಿನ ಬಸ್ ಗಳನ್ನು ಓಡಿಸುತ್ತಿವೆ ಎಂದು ಹೇಳಿದ್ದಾರೆ.

ಖಾಸಗಿ ಬಸ್ ಗಳು 3-4 ಪಟ್ಟು ಟಿಕೆಟ್ ದರ ಏರಿಕೆ ಮಾಡುತ್ತಿದ್ದು, ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನಾವೇ ಗರಿಷ್ಠ ಸಂಖ್ಯೆಯಲ್ಲಿ ಬಸ್ ಗಳನ್ನು ಕಾರ್ಯಾಚರಣೆಗಿಳಿಸಿ ಜನರಿಗೆ ಅನುಕೂಲ ಮಾಡಿಕೊಡುತ್ತಿದ್ದೇವೆ ಎಂದು ಸಚಿವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular