HomeLatest Newsಪತ್ರಕರ್ತರಿಗೆ ಬಡ್ಡಿ ರಹಿತ ಸಾಲ, 5 ಲಕ್ಷ ರೂ.ವರೆಗೆ ಉಚಿತ ಆರೋಗ್ಯ ಸೇವೆ: ದಿನೇಶ್ ಗುಂಡೂರಾವ್

ಪತ್ರಕರ್ತರಿಗೆ ಬಡ್ಡಿ ರಹಿತ ಸಾಲ, 5 ಲಕ್ಷ ರೂ.ವರೆಗೆ ಉಚಿತ ಆರೋಗ್ಯ ಸೇವೆ: ದಿನೇಶ್ ಗುಂಡೂರಾವ್

ಬೆಂಗಳೂರು: ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಕರ್ತರಿಗೆ ಬಡ್ಡಿ ರಹಿತ ಸಾಲ, ಉತ್ತಮ ಆರೋಗ್ಯ ಸೇವೆ ದೊರೆಯಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಕರ್ನಾಟಕ ಪತ್ರಕರ್ತರ ಸಹಕಾರ ಸಂಘ 75 ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಅರಮನೆ ರಸ್ತೆಯ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಆಯೋಜಿಸಿದ ಅಮೃತ ಸಂಭ್ರಮ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪತ್ರಕರ್ತರ ಕಾರ್ಯ ಸವಾಲಿನಿಂದ ಕೂಡಿದೆ. ಬಡ್ಡಿ ರಹಿತ ಸಾಲ ಅವರಿಗೆ ಕೊಡಲೇಬೇಕು. ಮಾನ್ಯತೆ ಪಡೆದ ಪತ್ರಕರ್ತರು ‘ಮಾಧ್ಯಮ ಸಂಜೀವಿನಿ’ ಯೋಜನೆಯ 5 ಲಕ್ಷದವರೆಗೆ ಉಚಿತ ಆರೋಗ್ಯ ಸೇವೆ ಪಡೆಯಬಹುದಾಗಿದ್ದು, ಎಲ್ಲ ನೈಜ ಪತ್ರಕರ್ತರಿಗೂ ಇದು ಸಿಗುವಂತಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪತ್ರಕರ್ತರ ಸಹಕಾರ ಸಂಘ ಇನ್ನಷ್ಟು ಸದೃಢವಾಗಬೇಕು. ಸಂಘಕ್ಕೆ 10 ಕೋಟಿ ರೂಪಾಯಿ ಬಡ್ಡಿ ರಹಿತ ಸಾಲ ನೀಡಲು ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿ ತಕ್ಷಣ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು ಅಥವಾ ಬಜೆಟ್ ನಲ್ಲಿ ಘೋಷಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಸಂಘದ ಅಧ್ಯಕ್ಷ ರಮೇಶ್ ಎಂ. ಪಾಳ್ಯ, ಉಪಾಧ್ಯಕ್ಷ ದೊಡ್ಡಬೊಮ್ಮಯ್ಯ, ಖಜಾಂಚಿ ಮೋಹನ್ ಕುಮಾರ್, ನಿರ್ದೇಶಕರಾದ ಆನಂದ್ ಬೈದನಮನೆ, ರಮೇಶ್ ಹಿರೇಜಂಬೂರು ಸೇರಿದಂತೆ ಹಲವರು ಇದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular