ಮಂಗಳೂರು: ಸುಮೋಟೋ ಕೇಸ್ ಗೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಎಂ.ಡಿ ಬೆಳ್ತಂಗಡಿ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಗೆ ಸಮೀರ್ ಎಂ.ಡಿ, ತನ್ನ ವಕೀಲರ ಜೊತೆ ವಿಚಾರಣೆಗೆ ಹಾಜರಾಗಿದ್ದಾರೆ. ಎಐ ವಿಡಿಯೋ ಮೂಲಕ ಗಲಭೆಗೆ ಪ್ರಚೋದನೆ, ತಪ್ಪು ಮಾಹಿತಿ ಹರಡಿದ ಆರೋಪದಲ್ಲಿ ಯೂಟ್ಯೂಬರ್ ಸಮೀರ್ ವಿರುದ್ಧ ಬೆಳ್ತಂಗಡಿ ಠಾಣೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಿದ್ದರು.
ವಿಚಾರಣೆಗೆ ಹಾಜರಾಗುವಂತೆ ಸಮೀರ್ ಎಂ.ಡಿ ಬೆಂಗಳೂರಿನ ನಿವಾಸ, ಬಳ್ಳಾರಿ ನಿವಾಸಕ್ಕೆ ನೋಟಿಸ್ ಅಂಟಿಸಲಾಗಿತ್ತು. ಸದ್ಯ ಮೂವರು ವಕೀಲರೊಂದಿಗೆ ಸಮೀರ್ ವಿಚಾರಣೆಗೆ ಹಾಜರಾಗಿದ್ದಾರೆ.