ಹಾಸನ: ಹೇಮಾವತಿ ನದಿಗೆ ಕಾರೊಂದು ಉರುಳಿ ಬಿದ್ದ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರಳಹಳ್ಳಿ ಗ್ರಾಮದಲ್ಲಿ ನಡೆದಿದೆ.
ತಡರಾತ್ರಿ ಕಾರೊಂದು ನಾಲೆಗೆ ಉರುಳಿ ಬಿದ್ದಿದ್ದು, ಕಾರಿನಲ್ಲಿದ್ದ ಇಬ್ಬರು ಶವವಾಗಿ ಪತ್ತೆಯಾಗಿದ್ದಾರೆ. ಮತ್ತಿಬ್ಬರು ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಓರ್ವ ಪುರುಷ ಹಾಗೂ ಓರ್ವ ಮಹಿಳೆಯ ಶವ ಪತ್ತೆಯಾಗಿದೆ.
ಹೊಳೆನರಸೀಪುರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ.