BREAKING: ಸಚಿವ ಸ್ಥಾನದಿಂದ ವಜಾಗೊಂಡ ಬಳಿಕ ಮೊದಲ ಚುನಾವಣೆಯಲ್ಲೇ ರಾಜಣ್ಣ ಪ್ರಾಬಲ್ಯ: ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ 6 ತಾಲೂಕುಗಳಲ್ಲೂ ಬೆಂಬಲಿಗರ ಗೆಲುವು

ತುಮಕೂರು: ತುಮಕೂರು ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಮಾಜಿ ಸಚಿವ ಕೆ.ಎನ್. ರಾಜಣ್ಣ ಪ್ರಾಬಲ್ಯ ಸಾಧಿಸಿದ್ದಾರೆ. ಆರು ತಾಲೂಕುಗಳ ಚುನಾವಣೆಯಲ್ಲಿ ರಾಜಣ್ಣ ಬೆಂಬಲಿಗರು ಗೆಲುವು ಸಾಧಿಸಿದ್ದಾರೆ.

ಈ ಮೂಲಕ ಕೆ.ಎನ್. ರಾಜಣ್ಣ ಮತ್ತೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಲಿದ್ದಾರೆ. 7ನೇ ಬಾರಿಗೆ ಅಧ್ಯಕ್ಷರಾಗಿ ಕೆ.ಎನ್. ರಾಜಣ್ಣ ಪದಗ್ರಹಣ ಮಾಡಲಿದ್ದಾರೆ. 25 ವರ್ಷಗಳಿಂದ ಡಿಸಿಸಿ ಬ್ಯಾಂಕ್ ನಲ್ಲಿ ರಾಜಣ್ಣ ಹಿಡಿತ ಸಾಧಿಸಿದ್ದಾರೆ.

ಸಚಿವ ಸ್ಥಾನದಿಂದ ವಜಾಗೊಂಡ ಬಳಿಕ ಮಾಜಿ ಸಚಿವ ರಾಜಣ್ಣ ಎದುರಿಸುತ್ತಿರುವ ಮೊದಲ ಚುನಾವಣೆ ಇದಾಗಿತ್ತು. ಸತತ ಆರು ಅವಧಿಯಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿರುವ ರಾಜಣ್ಣ ಅವರ ಏಳನೇ ಬಾರಿ ಅಧ್ಯಕ್ಷರಾಗುವ ನಿರೀಕ್ಷೆ ಇದೆ. ನಿರ್ದೇಶಕ ಮಂಡಳಿಯ 14 ಸ್ಥಾನಗಳಲ್ಲಿ 8 ಸ್ಥಾನಗಳಿಗೆ ರಾಜಣ್ಣ ಬಣದವರು ಅವಿರೋಧ ಆಯ್ಕೆಯಾಗಿದ್ದರು. ಆರು ಸ್ಥಾನಗಳಲ್ಲಿ ಸವಾಲು ಇದ್ದರೂ ರಾಜಣ್ಣ ಮೇಲುಗೈ ಸಾಧಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read