ನೆಲಮಂಗಲ: ಬೈಕ್ ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಫಾರೆಸ್ಟ್ ಗಾರ್ಡ್ ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.
ಇಲ್ಲಿನ ಹನುಮಂತಪುರ ಗೇಟ್ ಬಳಿ ಈ ಅಪಘಾತ ಸಂಭವಿಸಿದೆ. ಫಾರೆಸ್ಟ್ ಗಾರ್ಡ್ ಹಾಗೂ ಸೆಂಟ್ರಿಂಗ್ ಕೆಲಸ ಮಾಡುವ ವ್ಯಕ್ತಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ನೆಲಮಮ್ಗಲ ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ. ನೆಲಮಂಗಲ ಬಳಿ ರಸ್ತೆ ಅಗಲೀಕರ ಕಾಮಗಾರಿ ನಡೆಯುತ್ತಿದೆ. ಒಂದೆಡೆ ವಾಹನ ದಟ್ಟಣೆ ಇರುವುದರಿಂದ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.