ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ 90% ತನಿಖೆ ಮುಗಿದಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ಧರ್ಮಸ್ಥಳ ಪ್ರಕರಣದಲ್ಲಿ ತನಿಖೆ ಬಹುತೇಕ ಮುಕ್ತಾಯವಾಗಿದೆ. ಎನ್ ಐಎ ಅಥವಾ ಸಿಬಿಐ ತನಿಖೆ ಅಗತ್ಯವಿಲ್ಲ. ನಮ್ಮ ಪೊಲೀಸರೇ ಸಮರ್ಥವಾಗಿದ್ದಾರೆ ಎಂದು ಹೇಳಿದರು.
ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಬಗ್ಗೆ ವ್ಯಾಪಕವಾಗಿ ಯೂಟ್ಯೂಬರ್ಸ್ ಪರ, ವಿರೋಧ ಇದ್ದರೂ ಎಲ್ಲವೂ ಅಂತ್ಯವಗುತ್ತದೆ. ಇದರಲ್ಲಿ ಬೇರೆ ತನಿಖೆ ಅಗತ್ಯವಿಲ್ಲ ಎಂದು ಹೇಳಿದರು.
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಹ್ವಾನ ವಿಚಾರವಾಗಿ ಅಬ್ದುಲ್ ಕಲಾಂ ರಾಷ್ಟ್ರಪತಿಯವರಾಗಿರಲಿಲ್ಲವೇ? ಅಬ್ದುಲ್ ಕಲಾಂ ರಾಷ್ಟ್ರಪತಿಯಾಗಿದ್ದರು ಅಂದ ಮ್ರೇಲೆ ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡೋದ್ರಲ್ಲಿ ತಪ್ಪೇನಿದೆ? ಅವರು ಇದೇ ಮಣ್ಣಿನಲ್ಲಿ ಹುಟ್ಟಿ ಅಭಿಮಾನ ಇರುವಂತವರು. ಎಲ್ಲಾ ಧರ್ಮವನ್ನೂ ಸಮಾನವಾಗಿ ಕಾಣುವಂತವರು. ಬೂಕರ್ ಪ್ರಶಸ್ತಿ ವಿಜೇತರು. ದಸರಾ ಉದ್ಘಾಟಿಸಿದರೆ ತಪ್ಪೇನು? ಎಂದು ಕೇಳಿದರು.