ದೇವನಹಳ್ಳಿ: ಸರ್ಕಾರಿ ಶಾಲೆಯ ಕಿಟಕಿ ಸಜ್ಜಾ ಮುರಿದು ಬಿದ್ದು ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದಿದೆ.
ದೇವನಹಳ್ಳಿ ಪಟ್ಟಣದ ಕೋಟೆ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಮಧ್ಯಾಹ್ನ ಊಟದ ಸಮಯದಲ್ಲಿ ಮಕ್ಕಳು ಶಾಲೆಯಲ್ಲಿ ಆಟವಾಡುತ್ತಿದ್ದರು. ಈ ವೇಳೆ ಕಿಟಕಿ ಸಜ್ಜಾ ಮುರಿದು ಬಿದ್ದಿದೆ.
ಘಟನೆಯಲ್ಲಿ ಮಕ್ಕಳಾದ ದರ್ಶನ್, ಭುವನ್ ಹಾಗೂ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ದೇವನಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.