ಬೆಂಗಳೂರು: ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಮಡೆನೂರು ಮನು ನಟ ಶಿವರಾಜ್ ಕುಮಾರ್ ಅವರನ್ನು ಭೇಟಿಯಾಗಿ ಕ್ಷಮೆಯಾಚಿಸಿರುವ ಘಟನೆ ನಡೆದಿದೆ.
ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಮಡೆನೂರು ಮನು, ಶಿವಣ್ಣ ಅವರನ್ನು ಭೇಟಿಯಾಗಿ ಕ್ಷಮೆ ಕೇಳಿದರು. 4-5 ಬಾರಿ ಭೇಟಿಗೆ ಯತ್ನಿಸಿದರೂ ಸಾಧ್ಯವಾಗಿರಲಿಲ್ಲ ಎಂದು ಹೇಳಿದರು. ಈ ವೇಳೆ ನಟ ಶಿವರಾಜ್ ಕುಮಾರ್, ಚಿತ್ರರಂಗದಲ್ಲಿ ಚನ್ನಾಗಿ ಬೆಳೆಯುವಂತೆ ಆಶಿರ್ವಾದ ಮಾಡಿದರು.
ಕೆಲ ದಿನಗಳ ಹಿಂದೆ ಕನ್ನಡ ಚಿತ್ರರಂಗದ ಸ್ಟಾರ್ ನಟರಾದ ಶಿವರಾಜ್ ಕುಮಾರ್, ಕಿಚ್ಚಾ ಸುದೀಪ್, ದರ್ಶನ್ ಸೇರಿದಂತೆ ಹಲವರ ವಿರುದ್ಧ ಮಡೆನೂರು ಮನು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಭಾರಿ ವೈರಲ್ ಆಗಿತ್ತು. ಮಡೆನೂರು ಮನು ವಿರುದ್ಧ ಚಿತ್ರರಂಗದಿಂದ ಕ್ರಮ ಕೈಗೊಳ್ಲುವಂತೆ ಒತ್ತಾಯಗಳು ಕೇಳಿಬಂದಿದ್ದವು. ಈ ಬೆಳವಣಿಗೆ ಬೆನ್ನಲ್ಲೇ ಮಡೆನೂರು ಮನು ಶಿವಣ್ಣ ಅವರ ಕ್ಷಮೆಯಾಚಿಸಿದ್ದಾರೆ.