ಕಾರವಾರ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ತರಕಾರಿ ಅಂಗಡಿ ಬೆಂಕಿಯಲ್ಲಿ ಹೊತ್ತಿ ಉರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ.
ಖಾಸಿಂ ಫ್ರೂಟ್ಸ್ ಆಂಡ್ ವೆಜಿಟೇಬಲ್ಸ್ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಂಗಡಿ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಲಕ್ಷಾಂತರ ರೂಪಾಯಿ ಹಣ್ಣು, ತರಕಾರಿಗಳು ಹಾನಿಯಾಗಿವೆ.
ಘಟನಾ ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಭಟ್ಕಳ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.