ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಶೈಕ್ಷಣಿಕ ಪದವಿ ಕುರಿತ ಮಾಹಿತಿಯನ್ನು ಬಹಿರಂಗಪಡಿಸುವಂತೆ ಕೇಂದ್ರ ಮಾಹಿತಿ ಆಯುಕ್ತರು ನೀಡಿದ್ದ ಆದೇಶವನ್ನು ದೆಹಲಿ ಹೈಕೋರ್ಟ್ ರದ್ದು ಮಾಡಿದೆ.
ಕೇಂದ್ರ ಮಾಹಿತಿ ಆಯುಕ್ತರ ಆದೇಶ ಪ್ರಶ್ನಿಸಿ ದೆಹಲಿ ವಿಶ್ವವಿದ್ಯಾಲಯ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ದತ್ತಾ ಅವರು ಫೆಬ್ರವರಿ 27ರಂದು ಕಾಯ್ದಿರಿಸಿದ್ಧ ತೀರ್ಪನ್ನು ಆಗಸ್ಟ್ 25ರಂದು ಪ್ರಕಟಿಸಿದ್ದಾರೆ.
ಪ್ರಧಾನಿ ಮೋದಿ ಅವರ ವ್ಯಾಸಂಗಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸುವಂತೆ ಕೋರಿ ನೀರಜ್ ಎಂಬುವರು ಮೂಲಕ ಅರ್ಜಿ ಸಲ್ಲಿಸಿದ್ದರು. ಕೇಂದ್ರ ಮಾಹಿತಿ ಆಯುಕ್ತರು ನೀಡಿದ ಆದೇಶವನ್ನು ದೆಹಲಿ ಹೈಕೋರ್ಟ್ ರದ್ದು ಮಾಡಿ ಸೋಮವಾರ ತೀರ್ಪು ಪ್ರಕಟಿಸಿದೆ.