ಬೆಂಗಳೂರು : ರಾಜ್ಯದಲ್ಲಿ ಎಸ್ ಸಿ ಸಮುದಾಯಕ್ಕೆ ಶಿಕ್ಷಣ , ಉದ್ಯೋಗದಲ್ಲಿ ಒಳಮೀಸಲಾತಿ ಜಾರಿ ಮಾಡಿ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಏನಿದೆ ಆದೇಶದಲ್ಲಿ
ಕರ್ನಾಟಕ ಸರ್ಕಾರವು ಮಾನ್ಯ ಸರ್ವೋಚ್ಚ ನ್ಯಾಯಾಲಯವು CA No 2317 ರಲ್ಲಿ ಮಾನ್ಯ ಸರ್ವೋಚ್ಚ ನ್ಯಾಯಾಲಯವು ಪಂಜಾಬ್ ರಾಜ್ಯ ಮತ್ತು ಇತರರು Vs ದೇವಿಂದರ್ ಸಿಂಗ್ ಪ್ರಕರಣದಲ್ಲಿ ನೀಡಿರುವ ತೀರ್ಪಿನ ಅನ್ವಯ ಪರಿಶಿಷ್ಟ ಜಾತಿಗಳ ಒಳಮೀಸಲಾತಿ (ವರ್ಗೀಕರಣ) ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಆಯೋಗ ವಿಚಾರಣಾ ಕಾಯ್ದೆ 1952 ರಂತೆ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಇವರ ನೇತೃತ್ವದ ಏಕ ಸದಸ್ಯ ಆಯೋಗವನ್ನು ಸರ್ಕಾರದ : SWD/SLP/8 2024(P-1), ໖: 12-11-2024 ১০: 03-12-2024 ರಂತೆ ರಚಿಸಿ ಆದೇಶಿಸಲಾಗಿದೆ. ಅದರಂತೆ, ಸದರಿ ಆಯೋಗವು ದಿನಾಂಕ: 04-08-2025 ರಂದು ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದೆ. ಆಯೋಗವು ಪರಿಶಿಷ್ಟ ಜಾತಿಗಳನ್ನು ಪ್ರವರ್ಗ ಎ, ಬಿ, ಸಿ, ಡಿ ಮತ್ತು ಇ ಎಂದು 5 ಗುಂಪುಗಳಾಗಿ ವರ್ಗೀಕರಿಸಿದ್ದು, ಸದರಿ ಆಯೋಗದ ವರದಿಯನ್ನು ಪರಿಶೀಲಿಸಿ, ಸೂಕ್ತ ನಿರ್ಧಾರಕ್ಕಾಗಿ, ಸಚಿವ ಸಂಪುಟದ ಮುಂದೆ ಮಂಡಿಸಲಾಗಿದೆ. ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ/ವರ್ಗೀಕರಣದ ಬಗ್ಗೆ ನ್ಯಾಯಮೂರ್ತಿ ಡಾ: ಹೆಚ್.ಎನ್. ನಾಗಮೋಹನ್ ದಾಸ್ ಆಯೋಗವು ನೀಡಿರುವ ವರದಿಯನ್ನು ಕೂಲಂಕುಷವಾಗಿ ಚರ್ಚಿಸಿ, ಕೆಲವು ಮಾರ್ಪಾಡುಗಳೊಂದಿಗೆ ಸದರಿ ವರದಿಯನ್ನು ಸಚಿವ ಸಂಪುಟವು ಒಪ್ಪಿರುತ್ತದೆ. ಈ ಹಿನ್ನೆಲೆಯಲ್ಲಿ ಈ ಕೆಳಕಂಡಂತೆ ಆದೇಶಿಸಿದೆ.
ಸರ್ಕಾರದ ಆದೇಶ ಸಂಖ್ಯೆ: ಸಕಇ 8 ಎಸ್ಎಲ್ಪಿ 2024, ಬೆಂಗಳೂರು ದಿನಾಂಕ: 25-8-2025
1) ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಅಗತ್ಯ ಮಾರ್ಪಾಡುಗಳೊಂದಿಗೆ ಅಂಗೀಕರಿಸಿ, ಪರಿಶಿಷ್ಟ ಜಾತಿಯಲ್ಲಿರುವ 101 ಜಾತಿಗಳನ್ನು 5 ಪ್ರವರ್ಗಗಳ ಬದಲಾಗಿ ಪ್ರವರ್ಗ- ಎ. ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಎಂದು 3 ಪ್ರವರ್ಗಳಾಗಿ ವರ್ಗೀಕರಿಸಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಶೇ.17% ಮೀಸಲಾತಿಯನ್ನು ಪ್ರವರ್ಗ- ಎ ರಲ್ಲಿನ ಸಮುದಾಯಗಳಿಗೆ ಶೇ.6%, ಪ್ರವರ್ಗ-ಬಿ ರಲ್ಲಿನ ಸಮುದಾಯಗಳಿಗೆ ಶೇ. 6% ಮತ್ತು ಪ್ರವರ್ಗ -ಸಿ ರಲ್ಲಿನ ಸಮುದಾಯಗಳಿಗೆ ಶೇ.5% ರಷ್ಟು ನಿಗಧಿಪಡಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಿದೆ. (ವಿವರಗಳನ್ನು ಅನುಬಂಧ-1, 2 ಮತ್ತು 3 ರಲ್ಲಿ ನೀಡಲಾಗಿದೆ.
2) ಆಯೋಗದ ವರದಿಯಲ್ಲಿನ ಪ್ರವರ್ಗ- ಇ ರಲ್ಲಿನ ಆದಿ ಕರ್ನಾಟಕ, ಆದಿ ದ್ರಾವಿಡ ಮತ್ತು ಆದಿ ಆಂಧ್ರ ಈ 3 ಸಮುದಾಯಗಳು ತಮ್ಮ ಮೂಲ ಜಾತಿಯನ್ನು ತಿಳಿಸದೇ ಇರುವುದರಿಂದ ಸದರಿ 3 ಜಾತಿಗಳು ಅನುಬಂಧಗಳಲ್ಲಿರುವ ಪ್ರವರ್ಗ-ಎ ಅಥವಾ ಪ್ರವರ್ಗ-ಬಿ ಗಳಲ್ಲಿ ಮೀಸಲಾತಿ ಸೌಲಭ್ಯವನ್ನು ಪಡೆಯಬಹುದು.
) ರಾಜ್ಯ ಸಿವಿಲ್ ಸೇವೆಗಳ ಹುದ್ದೆಗಳಿಗೆ ಒಳಮೀಸಲಾತಿ ಹಿನ್ನೆಲೆಯಲ್ಲಿ ತಡಹಿಡಿಯಲಾದ ನೇರ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಕ್ರಮವಹಿಸುವುದು. ಎಲ್ಲಾ ಇಲಾಖೆಗಳು ಮತ್ತು ಅವುಗಳ ಅಧೀನದ ಎಲ್ಲಾ ನಿಗಮ/ಮಂಡಳಿ/ಸಂಸ್ಥೆಗಳಲ್ಲಿ ಮುಂಬಡ್ತಿ ಪ್ರಕ್ರಿಯೆಯನ್ನೂ ಸಹ ಮುಂದುವರೆಸಬಹುದಾಗಿದೆ.
4) ಉದ್ಯೋಗಳ ನೇಮಕಾತಿಯಲ್ಲಿ ಹಾಜರಾಗುವ ಎಲ್ಲಾ ಅಭ್ಯರ್ಥಿಗಳಿಗೆ ಆಯಾ ನೇಮಕಾತಿಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲು ತೀರ್ಮಾನಿಸಲಾಗಿದ್ದು, ಈ ಬಗ್ಗೆ ಪ್ರತ್ಯೇಕವಾಗಿ ಆದೇಶ ಹೊರಡಿಸಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಅಗತ್ಯ ಕ್ರಮವಹಿಸುವುದು.
5) ಹೊಸ ದತ್ತಾಂಶ ಅಥವಾ ಮಾಹಿತಿ ಬಂದಾಗ ಅಗತ್ಯ ಮಾರ್ಪಾಡುಗಳನ್ನು ಮಾಡಲು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗಕ್ಕೆ ಅಧಿಕಾರ ನೀಡುವ ಬಗ್ಗೆ ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ ಅಧಿನಿಯಮ, 2002ಕ್ಕೆ ಸೂಕ್ತ ತಿದ್ದುಪಡಿ ಮಾಡಲಾಗುವುದು.
6) ಪರಿಶಿಷ್ಟ ಜಾತಿಗಳಲ್ಲಿನ ಚಲನಶೀಲತೆಯನ್ನು ಹಾಗೂ ಲಭ್ಯವಾಗುವ ದತ್ತಾಂಶಗಳನ್ನು ಪರಿಶೀಲಿಸಿಕೊಂಡು, ಕಾಲಕಾಲಕ್ಕೆ ಈ ಜಾತಿಗಳನ್ನು ಅಧ್ಯಯನ ಮಾಡಿ, ವರದಿ ನೀಡಲು ಶಾಶ್ವತ ಪರಿಶಿಷ್ಟ ಜಾತಿಗಳ ಆಯೋಗವನ್ನು ರಚಿಸಲಾಗುವುದು.
7) ಒಳ ಮೀಸಲಾತಿ ಹೋರಾಟಗಾರರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆಯಲು ನಿರ್ಧರಿಸಲಾಗಿದ್ದು, ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿರುವ ಅಪರಾಧ ಪ್ರಕರಣಗಳ ಕುರಿತು ಪರಿಶೀಲಿಸಿ ತುರ್ತಾಗಿ ಸರ್ಕಾರಕ್ಕೆ ಶಿಫಾರಸ್ಸು ಮಾಡುವ ಬಗ್ಗೆ ಸದರಿ ವಿಷಯಕ್ಕೆ ಸಂಬಂಧಿಸಿದ ಸಚಿವ ಸಂಪುಟ ಉಪಸಮಿತಿಯು ಕ್ರಮವಹಿಸುವುದು. (ಗೃಹ ಇಲಾಖೆ ಈ ಬಗ್ಗೆ ಅಗತ್ಯ ಕ್ರಮ ತೆಗೆದುಕೊಳ್ಳುವುದು)
ಮೇಲ್ಕಂಡ ಆದೇಶವನ್ನು ಸಚಿವ ಸಂಪುಟ ಪ್ರಕರಣ ಸಂಖ್ಯೆ: ಸಿ658/2025, ದಿನಾಂಕ: 19-08-2025ರನ್ನಯ ಹೊರಡಿಸಲಾಗಿದೆ.






