HomeLatest NewsBREAKING : ರೌಡಿಶೀಟರ್ 'ಬಿಕ್ಲು ಶಿವ' ಕೊಲೆ ಕೇಸ್ : 'CID' ಯಿಂದ A-1...

BREAKING : ರೌಡಿಶೀಟರ್ ‘ಬಿಕ್ಲು ಶಿವ’ ಕೊಲೆ ಕೇಸ್ : ‘CID’ ಯಿಂದ A-1 ಆರೋಪಿ ಜಗದೀಶ್ ಅಲಿಯಾಸ್ ಜಗ್ಗ ಅರೆಸ್ಟ್.!

ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಎ -1 ಆರೋಪಿ ಜಗದೀಶ್ ಬಂಧನವಾಗಿದೆ. ದೆಹಲಿ ಏರ್ ಪೋರ್ಟ್ ನಲ್ಲಿ ಜಗ್ಗನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕೊಲೆ ಪ್ರಕರಣದ ಬಳಿಕ ತಲೆಮರೆಸಿಕೊಂಡಿದ್ದ ಜಗ್ಗ ಕೊನೆಗೂ ಅರೆಸ್ಟ್ ಆಗಿದ್ದಾನೆ.

ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಸುಪಾರಿ ಪಡೆದಿದ್ದ ನಾಲ್ವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದರು. ಆದರೆ ಇದುವರೆಗೆ ಕೂಡ ಪ್ರಮುಖ ಆರೋಪಿ ಬಂಧನವಾಗಿರಲಿಲ್ಲ. ಇದೀಗ ಪ್ರಕರಣದ ಪ್ರಮುಖ ಆರೋಪಿಯ ಬಂಧನವಾಗಿದೆ.

ರೌಡಿಶೀಟರ್ ಬಿಕ್ಲು ಶಿವ ಕೊಲೆ ಮಾಡಲು ಗ್ಯಾಂಗ್ ಒಂದೂವರೆ ಲಕ್ಷ ಹಣ ಸುಪಾರಿ ಪಡೆದಿತ್ತು ಎನ್ನಲಾಗಿದೆ. ನರಸಿಂಹ ಎಂಬಾತನ ಗ್ಯಾಂಗ್ ಕೊಲೆ ಮಾಡಲು ಸುಪಾರಿ ಪಡೆದಿದ್ದಿತ್ತು ರೌಡಿಶೀಟರ್ ಶಿವಪ್ರಕಾಶ್ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್ ಹೆಸರು ತಳುಕು ಹಾಕಿಕೊಂಡಿದ್ದು, ಬೈರತಿ ಬಸವರಾಜ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.ಭಾರತಿನಗರ ಠಾಣೆಯಲ್ಲಿ ಬೈರತಿ ಬಸವರಾಜ್ ಸೇರಿದಂತೆ ಐವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮಾಜಿ ಸಚಿವ ಬೈರತಿ ಬಸವರಾಜ್ ಎ5 ಆರೋಪಿಯಾಗಿದ್ದಾರೆ. ಜಗದೀಶ್ ಎ1, ಕಿರಣ್ ಎ2, ವಿಮಲ್ ಎ 3, ಅನಿಲ್ ಎ4 ರೋಪಿಗಳಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಿತ್ತನೂರು ಜಾಗದ ವಿಚಾರವಾಗಿ ರೌಡಿಶೀಟರ್ ಶಿವಪ್ರಕಾಶ್ ಕೊಲೆ ಮಾಡಲಾಗಿದೆ. ಬಿಳಿಬಣ್ಣದ ಸ್ಕಾರ್ಪಿಯೋದಲ್ಲಿ 8-9 ಜನರು ಬಂದು ಶಿವಪ್ರಕಾಶ್ ಗೆ ಬೆದರಿಕೆ ಹಾಕಿದ್ದರು. ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ತಾಯಿ ವಿಜಯಲಕ್ಷ್ಮೀ ದೂರು ನೀಡಿದ್ದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular