ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಮತ್ತು ಬುಧವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಗಾಳಿ ಸಹಿತ ಜೋರು ಮಳೆಯಾಗುವ ಸಂಭವವಿದೆ. ಕೆಲವು ಕಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.
ಬಾಗಲಕೋಟೆ, ಬೆಳಗಾವಿ, ಧಾರವಾಡ, ಕಲಬುರಗಿ, ಹಾವೇರಿ, ಗದಗ, ಬೀದರ್, ರಾಯಚೂರು, ಕೊಪ್ಪಳ, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದ್ದು, ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದ ಗಾಳಿ ಬೀಸಬಹುದು ಎಂದು ಹೇಳಲಾಗಿದೆ.