ಚಿಕ್ಕಮಗಳೂರು: ಚಿಕ್ಕಮಗಳೂರಿನ ಹಲವು ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತಶ್ರೇಣಿಯಲ್ಲಿರುವ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿಗೆ ಎರದು ದಿನಗಳ ಕಾಲ ಅಂದರೆ ಆಗಸ್ಟ್ 26 ಹಾಗೂ ಆಗಸ್ಟ್ 27ರಂದು ನಿರ್ಬಂಧ ಹೇರಲಾಗಿದೆ.
ರಜೆ ಹಿನ್ನೆಲೆಯಲ್ಲಿ ಪ್ರವಾಸಿಗರು ಈ ಬೆಟ್ಟಗಳಿಗೆ ತೆರಳುತ್ತಾರೆ. ಆದರೆ ಗೌರಿ-ಗಣೇಶ ಹಬ್ಬ ಹಿನ್ನೆಲೆಯಲ್ಲಿ ಸ್ಥಳೀಯರು ಇಂದು ಮತ್ತು ನಾಳೆ ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿಯಲ್ಲಿನ ಮುಳ್ಲಪ್ಪ ಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ನೆರವೇರಿಸುತ್ತಾರೆ. ಹೀಗಾಗಿ ಪ್ರವಾಸಿಗರ ದಟ್ಟಣೆಯಿಂದ ಪೂಜೆ ವಿಳಂಬವಾಗಬಾರದು ಎಂಬ ಕಾರಣಕ್ಕೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದಾರೆ.