ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಫೋಟದಿಂದ ಹಠಾತ್ ಪ್ರವಾಹ ಉಂಟಾಗಿ 10 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಥುವಾ, ಸಾಂಬಾ, ದೋಡಾ, ಜಮ್ಮು, ರಾಂಬನ್ ಮತ್ತು ಕಿಶ್ತ್ವಾರ್ ಜಿಲ್ಲೆಗಳು ಸೇರಿದಂತೆ ಜಮ್ಮು ಪ್ರದೇಶದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಈ ಘಟನೆ ನಡೆದಿದೆ. ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅನೇಕ ನದಿಗಳಲ್ಲಿ ನೀರಿನ ಮಟ್ಟವು ಈಗಾಗಲೇ ಅಪಾಯದ ಮಟ್ಟಕ್ಕಿಂತ ಮೀರಿ ಹರಿಯುತ್ತಿದ್ದು, ರಾತ್ರಿಯಿಡೀ ಮತ್ತಷ್ಟು ಏರಿಕೆಯಾಗುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. “ಜಮ್ಮು ಪ್ರದೇಶದಲ್ಲಿ ಪ್ರವಾಹದ ಎಚ್ಚರಿಕೆ ನೀಡಲಾಗಿದ್ದು, ಜನರು ಜಲಮೂಲಗಳು ಮತ್ತು ಭೂಕುಸಿತ ಪೀಡಿತ ಪ್ರದೇಶಗಳಿಂದ ದೂರವಿರಲು ಸೂಚಿಸಲಾಗಿದೆ” ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
#WATCH | Doda, Jammu and Kashmir | Continuous heavy rainfall across Doda district has triggered landslides, mudslides, and shooting stones, leading to the closure of several link roads as well as stretches of the national highway. pic.twitter.com/0EuHmW5XNu
— ANI (@ANI) August 26, 2025