ಬೆಂಗಳೂರು: ಮೆಟ್ರೋ ಸ್ಟೇಷನ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭದ್ರತಾ ಸಿಬ್ಬಂದಿಯೊಬ್ಬರು ಆಯ ತಪ್ಪಿ ಏಕಾಏಕಿ ಮೆಟ್ರೋ ಯೆಲ್ಲೋ ಲೈನ್ ಹಳಿಗೆ ಬಿದ್ದ ಘಟನೆ ಬೆಂಗಳೂರಿನ ರಾಗಿಗುಡ್ಡ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.
ಮೆಟ್ರೋ ಲೈನ್ ಪಕ್ಕ ನಡೆದು ಬರುತ್ತಿದ್ದವರು ಏಕಾಏಕಿ ನಿಯಂತ್ರಣ ತಪ್ಪಿ ಹಳದಿ ಲೈನ್ ಹಳಿ ಮೇಲೆ ಬಿದ್ದಿದ್ದಾರೆ. ತಕ್ಷಣ ಸಾವರಿಸಿಕೊಂಡು ಮೇಲೆ ಬರಲು ಯತ್ನಿಸಿದ್ದಾರೆ. ಆದರೆ ಸಾಧ್ಯವಾಗಿಲ್ಲ. ಬಳಿಕ ಕೂಡಲೇ ಅಲ್ಲಿದ್ದ ಪ್ರಯಾಣಿಕರನ್ನು ಕರೆದು ಮೇಲೆ ಹತ್ತಲು ಸಹಾಯ ಕೋರಿದ್ದಾರೆ. ಪ್ರಯಾಣಿಕರೊಬ್ಬರು ಧಾವಿಸಿ ಭದ್ರತಾ ಸಿಬ್ಬಂದಿಯ ಕೈ ಹಿಡಿದು ಮೇಲಕ್ಕೆತ್ತಿದ್ದಾರೆ.
ಅದೃಷ್ಟವಶಾತ್ ಭದ್ರತಾ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ. ಮೆಟ್ರೋ ನಿಲ್ದಾಣದ ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ.